ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ, ನಿರ್ದೇಶಕ ಸಾಧುಕೋಕಿಲ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುವ ಇರಾದೆ ವ್ಯಕ್ತಪಡಿಸಿದ್ದಾರೆ.
ಸಾಧುಕೋಕಿಲ ಮೂಲತಃ ಕ್ರಿಶ್ಚಿಯನ್ ಧರ್ಮ ಅನುಸರಿಸುತ್ತಾರೆ. ಹೀಗಾಗಿ ಇದೇ ಧರ್ಮದವರು ಹೆಚ್ಚಿರುವ ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಸಾಧುಕೋಕಿಲಗೆ ಟಿಕೆಟ್ ನೀಡುವಂತೆ ಕ್ರಿಶ್ಚಿಯನ್ ಸಮುದಾಯ ಕಾಂಗ್ರೆಸ್ ನಾಯಕರಿಗೆ ಬೇಡಿಕೆಯಿಟ್ಟಿದ್ದಾರೆ. ಅವಕಾಶ ಕೊಟ್ಟರೆ ಚುನಾವಣೆಗೆ ಕಾಂಗ್ರೆಸ್ ನಿಂದ ಸ್ಪರ್ಧಿಸುವುದಾಗಿ ಸಾಧುಕೋಕಿಲ ಕೂಡಾ ಹೇಳಿದ್ದಾರೆ.
ಈ ಮೊದಲು ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ನಾಯಕರು ಸಮಾವೇಶ, ರಾಹುಲ್ ಭಾರತ್ ಝೋಡೋ ಯಾತ್ರೆ ಮಾಡಿದ್ದಾಗ ಸಾಧುಕೋಕಿಲ ಕೂಡಾ ಪಾಲ್ಗೊಂಡಿದ್ದರು. ಇದೀಗ ಬೆಂಗಳೂರು ಸೆಂಟ್ರಲ್ ನಲ್ಲಿ 15 ಲಕ್ಷ ಕ್ರಿಶ್ಚಿಯನ್ ಸಮುದಾಯದವರಿದ್ದು, ಸಾಧುಕೋಕಿಲಗೆ ಟಿಕೆಟ್ ನೀಡುವಂತೆ ಒತ್ತಾಯ ಕೇಳಿಬಂದಿದೆ.
ಆದರೆ ನಾನು ಯಾವುದೇ ಧರ್ಮಕ್ಕೆ ಸೇರಿದವನಾಗಲು ಬಯಸುವುದಿಲ್ಲ. ನಾನು ಎಲ್ಲಾ ಸಮುದಾಯದವರೊಂದಿಗೆ ಗುರುತಿಸಲು ಬಯಸುತ್ತೇನೆ. ನನ್ನ ಹಿನ್ನಲೆ ಎಲ್ಲರಿಗೂ ಗೊತ್ತಿದೆ. ನನ್ನನ್ನು ಎಲ್ಲಾ ಸಮುದಾಯದವರು ಗುರುತಿಸುತ್ತಾರೆ. ಹೀಗಾಗಿ ಟಿಕೆಟ್ ಕೊಟ್ಟರೆ ಸ್ಪರ್ಧಿಸಲು ರೆಡಿ ಎಂದಿದ್ದಾರೆ.