ಪಾಕಿಸ್ತಾನದ ಕಲಾವಿದರು ಉಗ್ರರಲ್ಲ: ಸಲ್ಮಾನ್ ಖಾನ್ ವಾಗ್ದಾಳಿ

ಶುಕ್ರವಾರ, 30 ಸೆಪ್ಟಂಬರ್ 2016 (16:50 IST)
ಭಾರತೀಯ ಸೇನೆ ಗಡಿ ದಾಟಿ ಪಾಕ್ ಆಕ್ರಮಿತ ಕಾಶ್ಮಿರದ ಮೇಲೆ ದಾಳಿ ಮಾಡಿದ ನಂತರ ಬಾಲಿವುಡ್ ನಟ ಸಲ್ಮಾನ್ ಖಾನ್ ಬಹಿರಂಗವಾಗಿ ಪಾಕಿಸ್ತಾನದ ಕಲಾವಿದರನ್ನು ಬೆಂಬಲಿಸಿ ಹೇಳಿಕೆ ನೀಡಿ ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕಾಶ್ಮಿರದ ಉರಿ ಸೇನಾ ಕೇಂದ್ರದ ಮೇಲೆ ದಾಳಿ ನಡೆಸಿ ಸೈನಿಕರನ್ನು ಹತ್ಯೆಗೈದವರು ಉಗ್ರರು, ಪಾಕಿಸ್ತಾನದ ಕಲಾವಿದರು ಉಗ್ರರಲ್ಲ ಎಂದು ತಿಳಿಸಿದ್ದಾರೆ.
 
ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಪಾಕಿಸ್ತಾನದ ಕಲಾವಿದರು ಭಾರತ ಸರಕಾರದ ಅನುಮತಿ ಪಡೆದಿದ್ದಾರೆ. ಆದ್ದರಿಂದ, ಅವರಿಗೆ ಉದ್ಯೋಗ ನಿರಾಕರಿಸಲು ಯಾವುದೇ ಕಾರಣಗಳಿಲ್ಲ. ಉಭಯ ದೇಶಗಳ ಮಧ್ಯೆ ಶಾಂತಿಯುತ ವಾತಾವರಣ ನಿರ್ಮಿಸುವ ಅಗತ್ಯವಿದೆ ಎಂದು ಸಲಹೆ ನೀಡಿದ್ದಾರೆ.
 
ಭಾರತದ ಮೋಶನ್ ಪಿಕ್ಚರ್ಸ್ ಪ್ರೊಡ್ಯೂಸರ್ಸ್ ಅಸೋಸಿಯೇಶನ್ ನಿರ್ಣಯವೊಂದನ್ನು ಹೊರಡಿಸಿ, ಪಾಕಿಸ್ತಾನದ ಕಲಾವಿದರಿಗೆ, ತಂತ್ರಜ್ಞರಿಗೆ ನಿಷೇಧ ಹೇರಿದೆ.  
 
ಬಾಲಿವುಡ್ ನಟರಾದ ಅಮಿತಾಬ್ ಬಚ್ಚನ್, ಶಾರುಕ್ ಖಾನ್, ಅಕ್ಷಯ್ ಕುಮಾರ್, ಸಾಜಿದ್ ಖಾನ್ ಸೇರಿದಂತೆ ಹಲವಾರು ನಟರ ಭಾರತೀಯ ಸೇನೆಯ ಸೀಮಿತ ದಾಳಿಯನ್ನು ಶ್ಲಾಘಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ