‘ಪುಷ್ಪ’ ಸಿನಿಮಾಗೆ ಕುಣಿಯಲು ಸಮಂತಾ ಪಡೆಯಲಿರುವ ಸಂಭಾವನೆ ಎಷ್ಟು ಗೊತ್ತಾ?!
ಅಲ್ಲು ಅರ್ಜುನ್-ರಶ್ಮಿಕಾ ಮಂದಣ್ಣ ಪ್ರಧಾನ ಪಾತ್ರದಲ್ಲಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಪುಷ್ಪ ಸಿನಿಮಾದ ವಿಶೇಷ ಹಾಡಿಗೆ ಸಮಂತಾ ಹೆಜ್ಜೆ ಹಾಕಲಿದ್ದಾರೆ.
ಈ ಹಾಡೊಂದರಲ್ಲಿ ಹೆಜ್ಜೆ ಹಾಕಲು ಅವರು ಬರೋಬ್ಬರಿ 1.5 ಕೋಟಿ ರೂ. ಸಂಭಾವನೆ ಪಡೆಯಲಿದ್ದಾರೆ ಎಂಬ ಸುದ್ದಿಯಿದೆ. ನವಂಬರ್ ಕೊನೆಯ ವಾರದಲ್ಲಿ ಹಾಡಿನ ಚಿತ್ರೀಕರಣ ನಡೆಯುವ ಸಾಧ‍್ಯತೆಯಿದೆ.