ನಟ ನಾಗಭೂಷಣ್ ಕಾರು ಡಿಕ್ಕಿಯಾಗಿ ಮಹಿಳೆ ಸಾವು: ನಟ ಅರೆಸ್ಟ್
ಕೋಣನಕುಂಟೆ ಕ್ರಾಸ್ ಬಳಿ ದುರಂತ ಸಂಭವಿಸಿದೆ. ಪಾದಚಾರಿ ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದ ದಂಪತಿಗೆ ನಾಗಭೂಷಣ್ ಚಲಾಯಿಸುತ್ತಿದ್ದ ಕಾರು ಡಿಕ್ಕಿಯಾಗಿದೆ. ತಲೆಗೆ ಪೆಟ್ಟು ಬಿದ್ದ ಪರಿಣಾಮ 48 ವರ್ಷದ ಪ್ರೇಮಾ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ.
ಆಕೆಯ ಜೊತೆಗಿದ್ದ ಪತಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆ ಸೇರಿದ್ದಾರೆ. ಈ ಸಂಬಂಧ ಮೃತ ಮಹಿಳೆಯ ಪುತ್ರ ಪಾರ್ಥ ದೂರು ನೀಡಿದ್ದು, ಆ ಸಂಬಂಧ ನಟನನ್ನು ಪೊಲೀಸರು ಬಂಧಿಸಿದ್ದಾರೆ.