ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಅರೆಸ್ಟ್?

ಭಾನುವಾರ, 6 ಸೆಪ್ಟಂಬರ್ 2020 (18:46 IST)
ಡ್ರಗ್ಸ್ ಮಾಫಿಯಾ ಕೇಸ್ ಗೆ ಸಂಬಂಧಿಸಿದಂತೆ ಈಗಾಗಲೇ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ವಿರುದ್ಧ ಕೇಸ್ ದಾಖಲಾಗಿದ್ದರೆ, ಈಗ ಮತ್ತೊಬ್ಬ ನಟಿಗೆ ಬಂಧನ ಭೀತಿ ಶುರುವಾಗಿದೆ ಎನ್ನಲಾಗುತ್ತಿದೆ.  

ನಟಿ ಸಂಜನಾ ಗಲ್ರಾನಿಗೆ ಸಿಸಿಬಿ ಪೊಲೀಸರು ವಿಚಾರಣೆಗೆ ಹಾಜರಾಗುವ ನೋಟಿಸ್ ನೀಡುವ ಇಲ್ಲವೇ ಬಂಧನ ಭೀತಿ ಎದುರಿಸುತ್ತಿದ್ದಾರೆ ಎನ್ನಲಾಗಿದೆ.

ನಟಿ ಸಂಜನಾ ಆತ್ಮೀಯರಾದ ರಾಹುಲ್, ಪ್ರಶಾಂತ್ ರನ್ನು ಈಗಾಗಲೇ ಸಿಸಿಬಿ ಪೊಲೀಸರು ಬಂಧನ ಮಾಡಿದ್ದಾರೆ.

ಈಗಾಗಲೇ ನಟಿ ರಾಗಿಣಿ ದ್ವಿವೇದಿಯನ್ನು ಸಿಸಿಬಿ ವಿಚಾರಣೆ ನಡೆಸುತ್ತಿದ್ದು, ಯಾವುದೇ ಕ್ಷಣದಲ್ಲಿ ನಟಿ ಸಂಜನಾರನ್ನು ವಿಚಾರಣೆಗೆ ಕರೆಸಿಕೊಳ್ಳುವ ಸಾಧ್ಯತೆಗಳಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ