ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್‌

Sampriya

ಬುಧವಾರ, 15 ಅಕ್ಟೋಬರ್ 2025 (15:42 IST)
Photo Credit X
ಬೆಂಗಳೂರು: ಸ್ಯಾಂಡಲ್‌ವುಡ್‌ನ ಡಿಂಪಲ್‌ಕ್ವೀನ್‌ ರಚಿತಾ ರಾಮ್‌ ಕೊನೆಗೂ ತನ್ನ ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ್ದಾರೆ. ಕೆಲವೇ ದಿನಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುವುದಾಗಿ ಹೇಳಿಕೊಂಡಿದ್ದಾರೆ.

ಬಹುಭಾಷೆಗಳಲ್ಲಿ ನಟಿಸುತ್ತಿರುವ ರಚಿತಾ ರಾಮ್‌ ಬಹಳ ಬೇಡಿಕೆಯ ನಟಿ. ಅವರ ಮದುವೆ ಬಗ್ಗೆ ಅಭಿಮಾನಿಗಳಿಗೆ ಸಹಜವಾಗಿ ಕುತೂಹಲವಿದೆ. ಆ ಕುತೂಹಲ ತಣಿಸುವ ಪ್ರಯತ್ನವನ್ನು ರಚಿತಾ ರಾಮ್‌ ಅವರೇ ಮಾಡಿದ್ದಾರೆ. 

ರಚಿತಾ ರಾಮ್‌ ಅವರು ಈಚೆಗೆ 33ನೇ ವಸಂತಕ್ಕೆ ಕಾಲಿಟ್ಟಿದ್ದರು. ಈಚೆಗೆ ಬಿಡುಗಡೆಯಾದ ರಜನಿಕಾಂತ್ ಅವರ ಕೂಲಿ ಸಿನಿಮಾದಲ್ಲೂ ವಿಲನ್‌ ಪಾತ್ರದಲ್ಲಿ ನಟಿಸಿ ಭಾರೀ ಮೆಚ್ಚುಗೆ ಗಳಿಸಿದ್ದಾರೆ.  ಈಗಲೂ ಹಲವು ಸಿನಿಮಾಗಳು ಅವರ ಕೈಯಲ್ಲಿವೆ.

ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲೂ ಮದುವೆ ಬಗ್ಗೆ ಸುಳಿವು ನೀಡಿದ್ದ ರಚಿತಾ ರಾಮ್‌, ಮದುವೆಯಾಗುವ ಹುಡುಗ ಹೇಗಿರಬೇಕು ಎನ್ನುವ ಬಗ್ಗೆ ಯಾವ ಡ್ರೀಮ್ ಇಲ್ಲ. ಮನೆಯಲ್ಲಿ ಹುಡುಗನನ್ನ ಹುಡುಕುವ ಕಾರ್ಯ ನಡೆಯುತ್ತಿವೆ ಎನ್ನುವ ಅಭಿಪ್ರಾಯ ಹಂಚಿಕೊಂಡಿದ್ದರು. ಈಗ ಮತ್ತಷ್ಟು ಮುಂದುವರಿದು ಅಪ್‌ಡೇಟ್‌ ನೀಡಿದ್ದಾರೆ. 

ಸದ್ಯದಲ್ಲಿಯೇ ಮದುವೆ ಆಗುವೆ, ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಡುವೆ. ಲವ್ ಮ್ಯಾರೇಜೋ ಅಥವಾ ಅರೇಂಜ್ ಮ್ಯಾರೇಜೋ ಏನೋ ಮ್ಯಾರೇಜ್ ಆಗುವೆ. ಒಟ್ನಲ್ಲಿ ಇನ್ನು ಕೆಲವೇ ದಿನಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುವೆ ಎಂದು ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ