ಸ್ಯಾಂಡಲ್ವುಡ್ ಖ್ಯಾತ ನಿರ್ದೇಶಕ, ನಟ ಗುರುಪ್ರಸಾದ್ ನೇಣಿಗೆ ಶರಣಾಗಿರುವ ಘಟನೆ ಇಂದು ಬೆಳಕಿಗೆ ಬಂದಿದೆ. ಅಕ್ಕಪಕ್ಕದವರು ಮನೆಯಲ್ಲಿ ವಾಸನೆ ಬರುತ್ತಿದೆ ಎಂದು ನೋಡಿದಾಗ ಗುರುಪ್ರಸಾದ್ ನೇಣಿಗೆ ಶರಣಾಗಿರುವುದು ತಿಳಿದುಬಂದಿದೆ.
ಮಠ, ಎದ್ದೇಳು ಮಂಜುನಾಥ, ರಂಗನಾಯಕ, ಡೈರೆಕ್ಟರ್ ಸ್ಪೆಷಲ್ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ನೇರ ಮಾತು, ವಿವಾದಾತ್ಮಕ ಹೇಳಿಕೆಯಿಂದ ಗುರುತಿಸಿಕೊಂಡಿದ್ದ ಗುರುಪ್ರಸಾದ್ ಅವರು ಅನೇಕ ರಿಯಾಲಿಟಿ ಶೋಗಳಲ್ಲಿ ಜಡ್ಜ್ ಆಗಿ, ಬಿಗ್ಬಾಸ್ ಸೀಸನ್ 2ರಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದರು.
ಕಳೆದ 8 ತಿಂಗಳಿನಿಂದ ಬೆಂಗಳೂರಿನ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದರು. ಪ್ರಾಥಮಿಕ ಮಾಹಿತಿ ಪ್ರಕಾರ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಗುರುಪ್ರಸಾದ್ ಆತ್ಮಹತ್ಯೆ ಶರಣಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆರ್ಥಿಕ ಸಂಕಷ್ಟವೇ ಇವರ ಸಾವಿಗೆ ಕಾರಣ ಎನ್ನಲಾಗಿದೆ.
ಮೊದಲ ಪತ್ನಿಯಿಂದ ದೂರವಾದ ಗುರುಪ್ರಸಾದ್ ಅವರು ಈಚೆಗೆ ಎರಡನೇ ಮದುವೆ ಮಾಡಿಕೊಂಡಿದ್ದರು. ಈಚೆಗೆ ಇವರ ಯಾವುದೇ ಸಿನಿಮಾಗಳು ಹಿಟ್ ಆಗಿರಲಿಲ್ಲ. ಅದಲ್ಲದೆ ಸಾಕಷ್ಟು ಸಾಲವನ್ನು ಮಾಡಿಕೊಂಡಿದ್ದರು. ಸ್ಥಳಕ್ಕೆ ಮಾದನಾಯಕಹಳ್ಳಿ ಪೊಲೀಸರ ತಂಡ ಆಗಮಿಸಿ, ತನಿಖೆ ಆರಂಭಿಸಿದ್ದಾರೆ.