ಕಾವೇರಿ ಹೋರಾಟದಲ್ಲಿ ಭಾಗಿಯಾದ ಸ್ಟಾರ್ ನಟರು

ಶುಕ್ರವಾರ, 29 ಸೆಪ್ಟಂಬರ್ 2023 (17:01 IST)
Photo Courtesy: Twitter
ಬೆಂಗಳೂರು: ಕಾವೇರಿ ವಿವಾದದ ವಿಚಾರವಾಗಿ ಇಂದು ನಡೆದ ಕರ್ನಾಟಕ ಬಂದ್ ಮತ್ತು ಪ್ರತಿಭಟನೆಗೆ ಕನ್ನಡ ಚಿತ್ರರಂಗದ ಸ್ಟಾರ್ ಗಳು ಸಾಥ್ ಕೊಟ್ಟರು.

ಶಿವರಾಜ್ ಕುಮಾರ್ ನೇತೃತ್ವದಲ್ಲಿ ನೂರಾರು ಕಲಾವಿದರು ಪ್ರತಿಭಟನೆ ಸಭೆಯಲ್ಲಿ ಭಾಗಿಯಾದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಸಭೆಯಲ್ಲಿ ಎಲ್ಲಾ ಸ್ಟಾರ್ ನಟ-ನಟಿಯರು ಮಾತನಾಡಿ ಕಾವೇರಿ ಸಮಸ್ಯೆ ಬಗೆಹರಿಸಲು ಮನವಿ ಮಾಡಿದರು.

ರಿಯಲ್ ಸ್ಟಾರ್ ಉಪೇಂದ್ರ, ಚಾಲೆಂಜಿಂಗ್ ಸ್ಟಾರ್ ದರ್ಶನ್, ಪ್ರೇಮ್, ಧ್ರುವ ಸರ್ಜಾ, ವಸಿಷ್ಠ ಸಿಂಹ, ಹಂಸಲೇಖ, ಉಮಾಶ್ರೀ, ಗಿರಿಜಾ ಲೋಕೇಶ್, ಸೃಜನ್ ಲೋಕೇಶ್ ಮುಂತಾದವರು ಪಾಲ್ಗೊಂಡಿದ್ದಾರೆ. ಕಿಚ್ಚ ಸುದೀಪ್, ಯಶ್ ಮುಂತಾದ ಸ್ಟಾರ್ ನಟರು ಇಂದು ಪ್ರತಿಭಟನಾ ಸಭೆಯಲ್ಲಿ ಭಾಗಿಯಾಗಿಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ