ಹಿರಿಯ ನಟಿ ಬಿ ಸರೋಜಾ ದೇವಿ ಇನ್ನಿಲ್ಲ
ಬೆಂಗಳೂರಿನ ಮಲ್ಲೇಶ್ವರಂ ನಿವಾಸದಲ್ಲಿ ಅವರು ಸಾವನ್ನಪ್ಪಿದ್ದಾಗಿ ತಿಳಿದುಬಂದಿದೆ. ಸುಮಾರು 6 ದಶಕಗಳ ಕಾಲ ಚಿತ್ರರಂಗದಲ್ಲಿದ್ದ ಮೇರು ನಟಿಯಾಗಿದ್ದರು. ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಹಾಸಿಗೆ ಹಿಡಿದಿದ್ದರು ಎನ್ನಲಾಗಿದೆ.
ಪಂಚಭಾಷೆ ತಾರೆಯಾಗಿದ್ದ ಬಿ ಸರೋಜಾ ದೇವಿ ಚಿತ್ರರಂಗಕ್ಕೆ ಸಲ್ಲಿಸಿದ ಕೊಡುಗೆ ಅಪಾರ. ಅದರಲ್ಲೂ ಡಾ ರಾಜ್ ಕುಮಾರ್ ಜೊತೆಗೆ ನಟಿಸಿದ ಸಿನಿಮಾಗಳು ಈಗಲೂ ಜನರ ಮನಸ್ಸಿನಲ್ಲಿ ಅಚ್ಚಳಿಯದೇ ನಿಂತಿದೆ.
ಅಭಿನಯ ಸರಸ್ವತಿ ಎನ್ನುವ ಹೆಸರಿನಿಂದ ಕರೆಯಿಸಿಕೊಳ್ಳುತ್ತಿದ್ದ ಬಿ ಸರೋಜಾದೇವಿ ಕೊನೆಯದಾಗಿ 2019 ರಲ್ಲಿ ಪುನೀತ್ ರಾಜ್ ಕುಮಾರ್ ಅವರ ನಟ ಸಾರ್ವಭೌಮ ಸಿನಿಮಾದಲ್ಲಿ ಅಭಿನಯಿಸಿದ್ದರು. ಅವರು ಈಗ ಇಬ್ಬರು ಮಕ್ಕಳು ಮತ್ತು ಅಪಾರ ಬಂಧು ಮಿತ್ರರು ಅಭಿಮಾನಿಗಳನ್ನು ಅಗಲಿದ್ದಾರೆ.