ಸಂಜನಾ ಗಲ್ರಾನಿಗೆ 2 ದಿನದ ಜೈಲು ಫಿಕ್ಸ್

ಬುಧವಾರ, 16 ಸೆಪ್ಟಂಬರ್ 2020 (17:28 IST)
ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ಸಂಜನಾ ಗಲ್ರಾನಿಯನ್ನು 2 ದಿನಗಳ ನ್ಯಾಯಾಂಗ ಬಂಧನಕ್ಕೊಪಿಸಲು ನ್ಯಾಯಾಧೀಶರು ಆದೇಶ ನೀಡಿದ್ದಾರೆ.


ಸಂಜನಾ ಪರ ವಕೀಲರ ವಾದ ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಧೀಶರು 2 ದಿನಗಳ ನ್ಯಾಯಾಂಗ ಬಂಧನ ಆದೇಶ ನೀಡಿದ್ದಾರೆ. ಹೀಗಾಗಿ ಸಂಜನಾ ಕೂಡಾ ಪರಪ್ಪನ ಅಗ್ರಹಾರ ಜೈಲು ಸೇರಬೇಕಾಗಿದೆ. ಸೆಪ್ಟೆಂಬರ್ 18 ರವರೆಗೆ ನ್ಯಾಯಾಂಗ ಬಂಧನ ಆದೇಶ ನೀಡಲಾಗಿದ್ದು, ಅದಾದ ಬಳಿಕ ಅವರಿಗೆ ಬೇಲಾ? ಜೈಲಾ ಎನ್ನುವುದು ನಿರ್ಧಾರವಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ