ಆರೋಗ್ಯ ಸರಿ ಇಲ್ಲ, ಜಾಮೀನು ಕೊಡಿ: ಹೈಕೋರ್ಟ್ ಕದ ತಟ್ಟಿದ ಸಂಜನಾ ಗಲ್ರಾನಿ

ಗುರುವಾರ, 3 ಡಿಸೆಂಬರ್ 2020 (09:20 IST)
ಬೆಂಗಳೂರು: ಡ್ರಗ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ಸಂಜನಾ ಗಲ್ರಾನಿ ಮತ್ತೆ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.


ಸಂಜನಾ ಈ ಬಾರಿ ಆರೋಗ್ಯ ನೆಪವೊಡ್ಡಿ ಜಾಮೀನು ನೀಡುವಂತೆ ಕೋರ್ಟ್ ಕದ ತಟ್ಟಿದ್ದಾರೆ. ನವಂಬರ್ 27 ರಂದೇ ಸಂಜನಾ ತಮ್ಮ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಕಳೆದ ಮೂರು ತಿಂಗಳಿನಿಂದ ಸಂಜನಾ ಮತ್ತು ರಾಗಿಣಿ ದ್ವಿವೇದಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ