ಬೆಂಗಳೂರು: ನಟಿ ಸಂಜನಾ ಗಲ್ರಾನಿ ಕಸದ ರಾಶಿ ನಡುವೆ ಫೋಟೋ ಶೂಟ್ ಮಾಡಿಸಿಕೊಂಡು ಎಲ್ಲರ ಗಮನ ಸೆಳೆದಿದ್ದಾರೆ.
ತಾಯಂದಿರ ದಿನದ ಅಂಗವಾಗಿ ಸಂಜನಾ ಭೂಮಿ ತಾಯಿಯನ್ನು ಸಂರಕ್ಷಿಸುವ ಬಗ್ಗೆ ಜಾಗೃತಿ ಮೂಡಿಸಲು ಇಂತಹದ್ದೊಂದು ವಿಶೇಷ ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ. ಅವರ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇತ್ತೀಚೆಗಷ್ಟೇ ಕೊರೋನಾದಿಂದ ಚೇತರಿಸಿಕೊಂಡಿರುವ ಸಂಜನಾ ಈಗ ಸ್ವತಃ ತಮ್ಮ ಫೌಂಡೇಷನ್ ಮೂಲಕ ಸಂತ್ರಸ್ತರಿಗೆ ನೆರವು ನೀಡುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಹಸಿದವರಿಗೆ ತಮ್ಮ ಸಂಗಡಿಗರ ಜೊತೆ ಸೇರಿಕೊಂಡು ಊಟದ ವ್ಯವಸ್ಥೆ ಮಾಡುತ್ತಿದ್ದಾರೆ.