ಹಿಂದಿಗೆ ರಿಮೇಕ್ ಆಗಲಿರುವ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ

ಬುಧವಾರ, 29 ನವೆಂಬರ್ 2023 (09:39 IST)
ಬೆಂಗಳೂರು: ರಕ್ಷಿತ್ ಶೆಟ್ಟಿ ನಿರ್ಮಿಸಿ ನಟಿಸಿದ್ದ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಈಗ ಪರಭಾಷಿಕರಿಗೂ ಇಷ್ಟವಾಗುತ್ತಿದೆ.

ಈ ಸಿನಿಮಾ ಹಿಂದಿ ಹೊರತುಪಡಿಸಿ ಉಳಿದ ಭಾಷೆಗಳಲ್ಲಿ ಬಿಡುಗಡೆಯಾಗಿತ್ತು. ಆದರೆ ಈಗ ಸಿನಿಮಾ ನೋಡಿದ ಮೇಲೆ ಬಾಲಿವುಡ್ಡಿಗರಿಗೂ ಇಷ್ಟವಾಗುತ್ತಿದೆ. ಹೀಗಾಗಿ ನಿರ್ಮಾಪಕರೊಬ್ಬರು ಹಿಂದಿಯಲ್ಲಿ ರಿಮೇಕ್ ಮಾಡಲು ಮುಂದೆ ಬಂದಿದ್ದಾರೆ.

ದಕ್ಷಿಣದ ಸಿನಿಮಾಗಳನ್ನು ಬಹುವಾಗಿ ಮೆಚ್ಚಿಕೊಳ್ಳುವ ನಿರ್ಮಾಪಕ ಕರಣ್ ಜೋಹರ್ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾವನ್ನು ಮೆಚ್ಚಿಕೊಂಡಿದ್ದು ರಿಮೇಕ್ ಮಾಡಲು ಮುಂದಾಗಿದ್ದಾರೆ. ಈ ಬಗ್ಗೆ ಸಿನಿಮಾ ತಂಡದ ಜೊತೆ ಮಾತುಕತೆ ನಡೆಸುತ್ತಿದ್ದಾರಂತೆ.

ಸಪ್ತ ಸಾಗರದಾಚೆ ಎಲ್ಲೋ ಸಿನಿಮಾವನ್ನು ಹೇಮಂತ್ ರಾವ್ ನಿರ್ದೇಶಿಸಿದ್ದಾರೆ. ಇದೊಂಥರಾ ಭಾವನಾತ್ಮಕ ಸಿನಿಮಾವಾಗಿದ್ದು, ಎರಡು ಭಾಗಗಳಲ್ಲಾಗಿ ಬಿಡುಗಡೆಯಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ