ಪುನೀತ್ ರಾಜ್ ಕುಮಾರ್ ಹೆಸರಲ್ಲಿ ಉಪಗ್ರಹ ನಿರ್ಮಾಣ!

ಮಂಗಳವಾರ, 1 ಮಾರ್ಚ್ 2022 (09:05 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮೇಲಿನ ಅಭಿಮಾನದಿಂದ ರಾಜ್ಯದ 20 ಸರ್ಕಾರಿ ಶಾಲೆಗಳ 100 ಮಕ್ಕಳು ಉಪಗ್ರಹ ನಿರ್ಮಾಣಕ್ಕೆ ಮುಂದಾಗಿದ್ದಾರೆ.

ಎಲ್ಲವೂ ಅಂದುಕೊಂಡಂತೇ ಆದರೆ ಪುನೀತ್ ಹೆಸರಿನಲ್ಲಿ ಉಪಗ್ರಹವೊಂದು ನಭಕ್ಕೆ ಹಾರಲಿದ್ದಾರೆ. ಇಂತಹದ್ದೊಂದು ಪ್ರಯೋಗ ಇದೀಗ ಮಲ್ಲೇಶ್ವರದ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುತ್ತಿದೆ. ಇದಕ್ಕೆ ವಿವಿಧ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಕೈ ಜೋಡಿಸಿದ್ದಾರೆ.

ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿ ಅಶ್ವತ್ಥನಾರಾಯಣ್ ಈ ಬಗ್ಗೆ ಹೇಳಿದ್ದಾರೆ. ಸ್ವಾತಂತ್ರ್ಯದ 75 ನೇ ವರ್ಷಾಚರಣೆ ಅಂಗವಾಗಿ ಐಟಿಸಿಎ 75 ಉಪಗ್ರಹಗಳನ್ನು ಉಡಾವಣೆ ಮಾಡಲಾಗುತ್ತಿದೆ. ಈ ಪೈಕಿ ಒಂದನ್ನು ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಅಭಿವೃದ್ಧಿ ಪಡಿಸಲಿದ್ದಾರೆ. ಇದಕ್ಕೆ 1.90 ಕೋಟಿ ರೂ. ವಿನಿಯೋಗಿಸಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ