ತ್ರಿಶಾ ಬಗ್ಗೆ ಅವಹೇಳನಕಾರಿ ಹೇಳಿಕೆ: ನಟ ಮನ್ಸೂರ್ ಅಲಿ ಖಾನ್ ವಿರುದ್ಧ ದೂರು ದಾಖಲು

ಬುಧವಾರ, 22 ನವೆಂಬರ್ 2023 (16:04 IST)
Photo Courtesy: Twitter
ಹೈದರಾಬಾದ್: ನಟಿ ತ್ರಿಶಾ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ತೆಲುಗು ನಟ ಮನ್ಸೂರ್ ಅಲಿ ಖಾನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಲಿಯೋ ಸಿನಿಮಾದಲ್ಲಿ ಸಹನಟನಾಗಿದ್ದ ಮನ್ಸೂರ್ ಅಲಿ ಖಾನ್ ಸಂದರ್ಶನವೊಂದರಲ್ಲಿ ತ್ರಿಶಾ ಜೊತೆಗೆ ಬೆಡ್ ರೂಂ ಸೀನ್ ಇರಬಹುದು ಎಂದುಕೊಂಡಿದ್ದೆ. ಆದರೆ ಇಡೀ ಸಿನಿಮಾದಲ್ಲಿ ತ್ರಿಶಾ ಮುಖವನ್ನೇ ನನಗೆ ತೋರಿಸಲಿಲ್ಲ ಎಂದಿದ್ದರು.

ಅವರ ಈ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಮೆಗಾಸ್ಟಾರ್ ಚಿರಂಜೀವಿ ಕೂಡಾ ಇಂತಹ ಹೇಳಿಕೆ ಕೇವಲ ಒಬ್ಬ ನಟಿಗೆ ಮಾತ್ರವಲ್ಲ, ಮಹಿಳೆಯರಿಗೇ ಮಾಡಿದ ಅವಮಾನ. ಇಂತಹ ಹೇಳಿಕೆಗಳನ್ನು ಕಟು ಶಬ್ಧಗಳಲ್ಲಿ ಖಂಡಿಸಬೇಕು ಎಂದಿದ್ದರು.

ತ್ರಿಶಾ ವಿರುದ್ಧ ಹೇಳಿಕೆ ನೀಡಿದ್ದ ನಟನ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ರಾಷ್ಟ್ರೀಯ ಮಹಿಳಾ ಆಯೋಗ ಪೊಲೀಸರಿಗೆ ಆಗ್ರಹಿಸಿತ್ತು. ಅದರಂತೇ ಮನ್ಸೂರ್ ಅಲಿ ಖಾನ್ ವಿರುದ್ಧ ಲೈಂಗಿಕ ಕಿರುಕುಳ, ಮಹಿಳೆಯರ ಘನತೆಗೆ ಧಕ್ಕೆ ಪ್ರಕರಣ ದಾಖಲಿಸಲಾಗಿದೆ. ತ್ರಿಶಾ ಕೂಡಾ ನಟನ ಹೇಳಿಕೆಯನ್ನು ಖಂಡಿಸಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ