ಲೈಂಗಿಕ ಕಿರುಕುಳ ಪ್ರಕರಣ; ಇಂದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲಿರುವ ಅರ್ಜುನ್ ಸರ್ಜಾ
ಸೋಮವಾರ, 29 ಅಕ್ಟೋಬರ್ 2018 (10:45 IST)
ಬೆಂಗಳೂರು : ನಟಿ ಶ್ರುತಿ ಹರಿಹರನ್ ಅರ್ಜುನ್ ಸರ್ಜಾ ಮೇಲೆ ಮಾಡಿರುವ ಮಿ-ಟೂ ಆರೋಪ ಪ್ರಕರಣ ಸಂಬಂಧಿಸಿದಂತೆ ಸೋಮವಾರ (ಇಂದು) ಅರ್ಜುನ್ ಸರ್ಜಾ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂಬುದಾಗಿ ತಿಳಿದುಬಂದಿದೆ.
‘ವಿಸ್ಮಯ’ ಚಿತ್ರದ ಶೂಟಿಂಗ್ ವೇಳೆ ಅರ್ಜುನ್ ಸರ್ಜಾ ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ನಟಿ ಶ್ರುತಿ ಹರಿಹರನ್ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ನಟ ಅರ್ಜುನ್ ಸರ್ಜಾ ಅವರು ಬಂಧನದ ಭೀತಿಯಿಂದ ಇಂದು ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.