ಇನ್ ಸ್ಟಾಗ್ರಾಂ ಫಾಲೋವರ್ಸ್ ಸಂಖ್ಯೆಯಲ್ಲಿ ದೀಪಿಕಾರನ್ನು ಹಿಂದಿಕ್ಕಿದ ನಟಿ ಇವರೇ

ಬುಧವಾರ, 4 ನವೆಂಬರ್ 2020 (13:38 IST)
ಚೆನ್ನೈ : ಭಾರತದ ಅತ್ಯಂತ ಜನಪ್ರಿಯ ನಟಿಯರಲ್ಲಿ ಬಾಲಿವುಡ್ ನಟಿ ದಪಿಕಾ ಪಡುಕೋಣೆ ಅಗ್ರಸ್ಥಾನದಲ್ಲಿದ್ದಾರೆ. ಇಂತಹ ಖ್ಯಾತ ನಟಿಯನ್ನು ಮತ್ತೊಬ್ಬ ನಟಿ ಈ ವಿಚಾರದಲ್ಲಿ ಹಿಂದಿಕ್ಕಿದ್ದಾರಂತೆ.

ಹೌದು. ಇನ್ ಸ್ಟಾಗ್ರಾಂ ನಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ಸೆಲೆಬ್ರಿಟಿ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ. 82.2ಮಿಲಿಯನ್ ಫಾಲೋವರ್ಸ್ ಗಳನ್ನು ಹೊಂದುವ ಮೂಲಕ ಮೊದಲ ಸ್ಥಾನದಲ್ಲಿದ್ದಾರೆ. ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ 58.1 ಮಿಲಿಯನ್ ಫಾಲೋವರ್ಸ್ ನ್ನು ಹೊಂದುವ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ.

ಆದರೆ ಪ್ರಿಯಾಂಕ ನಂತರದ ಸ್ಥಾನದಲ್ಲಿದ್ದ ನಟಿ ದೀಪಿಕಾ ಪಡುಕೋಣೆ ಇದೀಗ 52.3 ಮಿಲಿಯನ್ ಫಾಲೋವರ್ಸ್ ನ್ನು ಹೊಂದುವ ಮೂಲಕ ನಾಲ್ಕನೇ ಸ್ಥಾನದಲ್ಲಿದ್ದಾರೆ. ನಟಿ ದೀಪಿಕಾರನ್ನು ಹಿಂದಿಕ್ಕಿ ಸಾಹೋ ನಟಿ ಶ್ರದ್ಧಾ ಕಪೂರ್ ಅತಿ ಕಡಿಮೆ ಸಮಯದಲ್ಲಿ 56.4 ಮಿಲಿಯನ್ ಫಾಲೋವರ್ಸ್ ಹೊಂದುವ ಮೂಲಕ ಮೂರನೇ ಸ್ಥಾನಕ್ಕೆ ಬಂದಿದ್ದಾರೆ. ಇವರ ವೇಗ ನೋಡಿದರೆ ಸದ್ಯದಲ್ಲೇ ನಟಿ ಪ್ರಿಯಾಂಕ ಚೋಪ್ರಾ ಅವರನ್ನು ಹಿಂದಿಕ್ಕಲಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ