ಡಾರ್ಲಿಂಗ್ ಕೃಷ್ಣ ಶುಗರ್ ಫ್ಯಾಕ್ಟರಿ ಸಿನಿಮಾಗೆ ನಟಿ ಶಿಲ್ಪಾ ಶೆಟ್ಟಿ ಆಗಮನ!
ಗುರುವಾರ, 24 ಡಿಸೆಂಬರ್ 2020 (10:58 IST)
ಬೆಂಗಳೂರು: ಡಾರ್ಲಿಂಗ್ ಕೃಷ್ಣ ಅಭಿನಯದ ಶುಗರ್ ಫ್ಯಾಕ್ಟರಿ ಸಿನಿಮಾಗೆ ಶಿಲ್ಪಾ ಶೆಟ್ಟಿ ಸೇರ್ಪಡೆಯಾಗಿದ್ದಾರೆ. ಶಿಲ್ಪಾ ಶೆಟ್ಟಿ ಎಂದರೆ ಬಾಲಿವುಡ್ ನಟಿ ಅಲ್ಲ!
ಮಂಗಳೂರು ಮೂಲದ ಬೆಡಗಿ ಶಿಲ್ಪಾ ಶೆಟ್ಟಿ ಸಿನಿಮಾ ತಂಡಕ್ಕೆ ಕೂಡಿಕೊಳ್ಳಲಿದ್ದಾರೆ. ತುಳು ಸಿನಿಮಾಗಳಲ್ಲಿ ಅಭಿನಯಿಸಿದ್ದ ಬೆಡಗಿ ಈಗ ಶುಗರ್ ಫ್ಯಾಕ್ಟರಿ ಸೇರಿಕೊಂಡಿದ್ದಾರೆ. ಈಗಾಗಲೇ ಈ ಸಿನಿಮಾದಲ್ಲಿ ಅದ್ವಿತಿ ಶೆಟ್ಟಿ, ಸೊನಾಲ್ ಮೊಂತೆರೊ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಅವರ ಜೊತೆಗೆ ಈಗ ಶಿಲ್ಪ ಶೆಟ್ಟಿ ಕೂಡಾ ಸೇರ್ಪಡೆಯಾಗಿದ್ದಾರೆ.