ಪತ್ನಿ ಗೀತಾ ಪರ ಪ್ರಚಾರ ಆರಂಭಿಸಿದ ಶಿವರಾಜ್ ಕುಮಾರ್

Krishnaveni K

ಬುಧವಾರ, 20 ಮಾರ್ಚ್ 2024 (17:09 IST)
ಶಿವಮೊಗ್ಗ: ಮುಂಬರುವ ಲೋಕಸಭೆ ಚುನಾವಣೆಗೆ ಶಿವಮೊಗ್ಗದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಪತ್ನಿ ಗೀತಾ ಪರವಾಗಿ ನಟ ಶಿವರಾಜ್ ಕುಮಾರ್ ಪ್ರಚಾರ ಆರಂಭಿಸಿದ್ದಾರೆ.

ತೆರೆದ ಜೀಪ್ ನಲ್ಲಿ ಬೆಂಬಲಿಗರೊಂದಿಗೆ ಶಿವಣ್ಣ ಮತ್ತು ಗೀತಾ ರೋಡ್ ಶೋ ನಡೆಸಿದ್ದು, ಮತ ಯಾಚನೆ ಮಾಡಿದ್ದಾರೆ. ಈ ವೇಳೆ ಶಿವರಾಜ್ ಕುಮಾರ್ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಅವರಿಗೆ ಸಾಥ್ ಕೊಟ್ಟಿದ್ದಾರೆ. ಮಾಜಿ ಸಿಎಂ ದಿವಂಗತ ಬಂಗಾರಪ್ಪನವರ ಮಗಳೂ ಆಗಿರುವ ಗೀತಾ ಶಿವರಾಜ್ ಕುಮಾರ್ ಈ ಹಿಂದೊಮ್ಮೆ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದರು.

ಆದರೆ ಈ ಬಾರಿ ಹೇಗಾದರೂ ಮಾಡಿ ಪತ್ನಿಯನ್ನು ಗೆಲ್ಲಿಸಿ ಸಂಸತ್ ಗೆ ಕಳುಹಿಸುವ ಪಣ ತೊಟ್ಟಿರುವ ಶಿವಣ್ಣ ಈಗಲೇ ಬಿರುಸಿನ ಪ್ರಚಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಈ ವೇಳೆ ಮಾತನಾಡಿರುವ ಶಿವರಾಜ್ ಕುಮಾರ್ ಪತ್ನಿ ಗೀತಾರನ್ನು ಗೆಲ್ಲಿಸಿಕೊಡುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.

ಗೀತಾ ಶಿವರಾಜ್ ಕುಮಾರ್ ಪರ ಮುಂದಿನ ದಿನಗಳಲ್ಲಿ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳೂ ಪ್ರಚಾರ ನಡೆಸುವ ಸಾಧ‍್ಯತೆಯಿದೆ. ಈಗಾಗಲೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ಮಾಪಕರು, ವಿತರಕ ಸಂಘದವರು ಗೀತಾ ಶಿವರಾಜ್ ಕುಮಾರ್ ಗೆ ಬೆಂಬಲ ವ್ಯಕ್ತಪಡಿಸಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ