ಬೈರಾಗಿ ಮೊದಲ ಹಾಡು ಬಿಡುಗಡೆಗೆ ಮುಹೂರ್ತ ಕೂಡಿಬಂತು

ಶುಕ್ರವಾರ, 29 ಏಪ್ರಿಲ್ 2022 (11:01 IST)
ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅಭಿನಯದ ಬೈರಾಗಿ ಸಿನಿಮಾ ರಿಲೀಸ್ ಗೆ ಸಿದ್ಧವಾಗಿದೆ.

ಈ ಸಿನಿಮಾ ಕಡೆಯಿಂದ ಹೊಸ ಅಪ್ ಡೇಟ್ ಒಂದು ಬಂದಿದೆ. ಇದೇ ಶನಿವಾರ ಚಿತ್ರದ ಮೊದಲ ಹಾಡಿನ ಬಿಡುಗಡೆ ದಿನಾಂಕ ಬಹಿರಂಗಪಡಿಸುವುದಾಗಿ ಚಿತ್ರತಂಡ ಘೋಷಿಸಿದೆ.

ವಿಜಯ್ ಮಿಲ್ಟನ್ ನಿರ್ದೇಶನದ ಬೈರಾಗಿ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಜೊತೆ ಡಾಲಿ ಧನಂಜಯ್, ಪೃಥ್ವಿ ಅಂಬರ್ ಮುಂತಾದ ಪ್ರತಿಭಾವಂತ ಕಲಾವಿದರು ಅಭಿನಯಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ