ಶ್ರೀಮುರಳಿ ‘ಭರಾಟೆ’ ಚಿತ್ರಕ್ಕೆ ಶಿವರಾಜ್ ಕುಮಾರ್ ಧ್ವನಿ

ಸೋಮವಾರ, 23 ಸೆಪ್ಟಂಬರ್ 2019 (08:53 IST)
ಬೆಂಗಳೂರು: ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಭರಾಟೆ ಸಿನಿಮಾ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿದ್ದು, ರಿಲೀಸ್ ಗೆ ಸಜ್ಜಾಗುತ್ತಿದೆ.


ಈಗಾಗಲೇ ಭರಾಟೆ ಸಿನಿಮಾದ ಎರಡು ಹಾಡುಗಳು ಸೂಪರ್ ಹಿಟ್ ಆಗಿವೆ. ಈಗ ಭರಾಟೆ ಚಿತ್ರತಂಡದಿಂದ ಮತ್ತೊಂದು ಹೊಸ ಸುದ್ದಿ ಬಂದಿದೆ.

ಭರಾಟೆ ಸಿನಿಮಾಗೆ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಧ್ವನಿ ನೀಡಿದ್ದಾರೆ. ಈಗಾಗಲೇ ತಮ್ಮ ರೆಕಾರ್ಡಿಂಗ್ ಮುಗಿಸಿದ್ದಾರೆ ಶಿವಣ್ಣ. ತಮ್ಮ ಚಿತ್ರಕ್ಕೆ ಶಿವರಾಜ್ ಕುಮಾರ್ ಧ್ವನಿ ನೀಡಿರುವ ಬಗ್ಗೆ ಖುಷಿಯಿಂದಲೇ ಶ್ರೀಮುರಳಿ ಹಂಚಿಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ