ಪತ್ನಿ ಗೀತಾ ಕಾಂಗ್ರೆಸ್ ಗೆ: ಪ್ರಚಾರಕ್ಕೆ ರೆಡಿ ಆದ ಶಿವರಾಜ್ ಕುಮಾರ್
ಮಾಜಿ ಮುಖ್ಯಮಂತ್ರಿ, ದಿವಂಗತ ಬಂಗಾರಪ್ಪ ಅವರ ಪುತ್ರಿಯೂ ಆಗಿರುವ ಗೀತಾ ಶಿವರಾಜ್ ಕುಮಾರ್ ಇಂದು ಮಧ್ಯಾಹ್ನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ.
ಬಳಿಕ ನಾಳೆಯಿಂದ ಗೀತಾ ಶಿವರಾಜ್ ಕುಮಾರ್ ಸೊರಬದಲ್ಲಿ ಪ್ರಚಾರ ನಡೆಸಲಿದ್ದಾರೆ. ಅವರಿಗೆ ಸಾಥ್ ಕೊಡುವುದಾಗಿ ಶಿವಣ್ಣ ಹೇಳಿದ್ದಾರೆ. ಸೊರಬದಿಂದ ಗೀತಾ ಸಹೋದರ ಮಧು ಬಂಗಾರಪ್ಪ ಕಾಂಗ್ರೆಸ್ ನಿಂದ ಮತ್ತು ಮತ್ತೊಬ್ಬ ಸಹೋದರ ಕುಮಾರ್ ಬಂಗಾರಪ್ಪ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಮಧು ಪರ ಗೀತಾ ಮತ್ತು ಶಿವರಾಜ್ ಕುಮಾರ್ ಪ್ರಚಾರ ನಡೆಸಲಿದ್ದಾರೆ.