ತಾಯಾಡ್ನಿಗೆ ಆಗಮಿಸಿದ ಶಿವರಾಜ್‌ಕುಮಾರ್‌ ಅದ್ಧೂರಿ ಸ್ವಾಗತ, ನಾಳೆ ಶಿವಣ್ಣ ಮನೆಯಲ್ಲಿ ಡಬಲ್ ಸೆಲೆಬ್ರೇಶನ್

Sampriya

ಭಾನುವಾರ, 26 ಜನವರಿ 2025 (10:14 IST)
Photo Courtesy X
ಬೆಂಗಳೂರು: ಸರ್ಜರಿಗಾಗಿ ಅಮೆರಿಕಾಕ್ಕೆ ಹೋಗಿದ್ದ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್‌ ಇಂದು ತಾಯ್ನಾಡಿಗೆ ಮರಳಿದ್ದಾರೆ. ಯಶಸ್ವಿ ಶಸ್ತ್ರಚಿಕಿತ್ಸೆ ಬಳಿಕ ರಾಜ್ಯಕ್ಕೆ ಆಗಮಿಸಿದ ಶಿವರಾಜ್‌ಕುಮಾರ್ ಅವರನ್ನು ನಟ ಶ್ರೀನಗರ ಕಿಟ್ಟಿ ಸ್ವಾಗತಿಸಿದರು.

ಮೂತ್ರಕೋಶದ ಕ್ಯಾನ್ಸರ್ ಸಂಬಂಧ ಆಪರೇಷನ್ ಮಾಡಿಸಿಕೊಳ್ಳಲು ನಟ ಶಿವರಾಜಕುಮಾರ್ ಡಿ.18 ರಂದು ಅಮೆರಿಕಕ್ಕೆ ತೆರಳಿದ್ದರು. 24ರಂದು ಶಿವಣ್ಣಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಯನ್ನು ಮಾಡಲಾಯಿತು.  ಆಪರೇಷನ್ ಬಳಿಕ ವಿಡಿಯೋ ಮೂಲಕ ತಮ್ಮ ಅಭಿಮಾನಿಗಳಿಗೆ ಆರೋಗ್ಯ ಸಂಬಂಧ ವಿಚಾರಗಳನ್ನು ಹಂಚಿಕೊಂಡಿದ್ದರು.  ಇದೀಗ ಸಂಪೂರ್ಣ ಗುಣಮುಖರಾಗಿ ತಾಯ್ನಾಡಿಗೆ ಮರಳಿದ್ದಾರೆ.

ಅಮೆರಿಕದಿಂದ ದುಬೈಗೆ ಬಂದಿಳಿದು, ಅಲ್ಲಿಂದ ಕನೆಕ್ಟೆಡ್ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಳಿಗ್ಗೆ 9ರ ಆಸುಪಾಸಿನಲ್ಲಿ ಬೆಂಗಳೂರಿನ ಏರ್ಪೋಟ್‌ನಲ್ಲಿ ಲ್ಯಾಂಡ್ ಆಗಿದ್ದು, ವಿಮಾನ ನಿಲ್ದಾಣದ ಪ್ರಕ್ರಿಯೆಗಳನ್ನು ಮುಗಿಸಿ ಆಗಮನ ಗೇಟ್ 1ರಲ್ಲಿ ಹೊರಬಂದಿದ್ದಾರೆ.

ಇನ್ನೂ ಶಿವಣ್ಣ ಅವರನ್ನು ಸ್ವಾಗತಿಸಲು 500ಕೆಜಿ ಹೂಗಳು ತಯಾರು ಮಾಡಿ ಕಾದಿದ್ದರು,  ಜೊತೆಗೆ ಮೂರು ಜೆಸಿಬಿಗಳ ಮೂಲಕ ಶಿವರಾಜಕುಮಾರ್ ಹಾಗೂ ಗೀತಾ ಶಿವರಾಜಕುಮಾರ್ ಅವರಿಗೆ ಹೂ ಹಾಕಿ ಸ್ವಾಗತಿಸಲು ಸಿದ್ಧತೆ ಮಾಡಿಕೊಂಡಿದ್ದು, ನಾಗವಾರದ ನಿವಾಸದ ಬಳಿ ಅಭಿಮಾನಿಗಳು ದಂಡು ಹರಿದು ಬಂದಿದೆ.

ಇನ್ನೂ ಶಿವಣ್ಣ ಆಗಮನದ ಹಿನ್ನೆಲೆ ಅವರ ಅಭಿಮಾನಿಗಳು ಬ್ಯಾನರ್, ಕಟೌಟ್ ಹಾಕಿ ಸ್ವಾಗತ ಮಾಡಿದ್ದಾರೆ.  ಇನ್ನೂ ಸೋಮವಾರ ಶಿವಣ್ಣನ ಮನೆಯಲ್ಲಿ ಹೊಸ ವರ್ಷ ಹಾಗೂ ಸಂಕ್ರಾಂತಿ ಸಂಭ್ರಮ ಒಟ್ಟೊಟ್ಟಿಗೆ ನಡೆಯಲಿದೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ