ಪುನೀತ್ ಸ್ಮರಣಾರ್ಥ ವಿಶೇಷ ಯೋಜನೆ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಶುಕ್ರವಾರ, 7 ಜುಲೈ 2023 (16:15 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ನೂತನ ಸರ್ಕಾರದ ಬಜೆಟ್ ನಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಹೊಸ ಯೋಜನೆ ಘೋಷಿಸಲಾಗಿದೆ.

ಪುನೀತ್ ರಾಜ್ ಕುಮಾರ್ ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದರು. ಇತ್ತೀಚೆಗೆ ಇಂತಹ ಪ್ರಕರಣಗಳು ಅನೇಕ ಕಡೆ ವರದಿಯಾಗುತ್ತಿದೆ. ಹೀಗಾಗಿ ಹಠಾತ್ ಹೃದಯ ಸಂಬಂಧೀ ಸಾವುಗಳನ್ನು ತಡೆಗಟ್ಟಲು ಪುನೀತ್ ಸ್ಮರಣಾರ್ಥ ಹೊಸ ಯೋಜನೆ ಹಮ್ಮಿಕೊಳ್ಳಲಾಗಿದೆ.

ಹಠಾತ್ ಹೃದಯಾಘಾತ ತಪ್ಪಿಸಲು ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳಲ್ಲಿ Automated External Defibrillators (AED) ಸ್ಥಾಪಿಸಲು ಬಜೆಟ್ ನಲ್ಲಿ 6 ಕೋಟಿ ರೂ. ಮೀಸಲಿಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ