ಹುಟ್ಟುಹಬ್ಬದ ದಿನ ಬಿಗ್ ಅಪ್‌ಡೇಟ್ ಕೊಟ್ಟ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ
ಏಕಂ ಬಗ್ಗೆ ಅಪ್‌ಡೇಟ್ ತರುತ್ತಿದ್ದೇವೆ. ಈ ಸ್ಥಳವನ್ನು ತುಂಬಾ ಹತ್ತಿರದಿಂದ ನೋಡಿ. ಮಚ್ ಲವ್ ಎಂದು ನಟ ಬರೆದುಕೊಂಡಿದ್ದು, ಜೂನ್ 17ರಂದು ಅಧಿಕೃತ ಮಾಹಿತಿ ನೀಡುತ್ತೇವೆ ಎಂದಿದ್ದಾರೆ.
ರಕ್ಷಿತ್ ಶೆಟ್ಟಿ ತಮ್ಮ ನಿರ್ಮಾಣ ಸಂಸ್ಥೆಯಿಂದ ಒಟಿಟಿ ಫ್ಲಾರ್ಟ್ ಫಾರಂಗೆ 8 ಎಪಿಸೋಡ್‌ಗಳ ಏಕಂ ವೆಬ್ ಸಿರೀಸ್ ನಿರ್ಮಾಣ ಮಾಡಿದ್ದಾರೆ. ಅವರೇ ನಿರ್ದೇಶನ ಕೂಡ ಮಾಡಿದ್ದಾರೆ ಎನ್ನಲಾಗಿದೆ. ಇದರ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಹೊರಬೀಳಬೇಕಿದೆ. ಸದ್ಯ ರಿಚರ್ಡ್ ಆ್ಯಂಟನಿ ಸಿನಿಮಾ ಸೇರಿದಂತೆ ರಕ್ಷಿತ್ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.