ಹೃದಯಾಘಾತದಿಂದ ನಿಧನರಾಗುವುದಕ್ಕೂ ಮುನ್ನ ಪುನೀತ್ ರಾಜ್ಕುಮಾರ್ ಅವರು ಹಲವು ಪ್ರಾಜೆಕ್ಟ್ಗಳಲ್ಲಿ ತೊಡಗಿಕೊಂಡಿದ್ದರು.
ಆ ಪೈಕಿ ಜೇಮ್ಸ್ ಸಿನಿಮಾ ಬಗ್ಗೆ ಫ್ಯಾನ್ಸ್ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ನಿರ್ದೇಶಕ ಚೇತನ್ ಕುಮಾರ್ ಅವರು ಈ ಸಿನಿಮಾದ ಬಹುತೇಕ ಶೂಟಿಂಗ್ ಪೂರ್ಣಗೊಳಿಸಿದ್ದಾರೆ. ಆದರೆ ಡಬ್ಬಿಂಗ್ ಪೂರ್ಣಗೊಳ್ಳುವುದಕ್ಕೂ ಮುನ್ನವೇ ಪುನೀತ್ ರಾಜ್ಕುಮಾರ್ ಇಹಲೋಕ ತ್ಯಜಿಸಿದ್ದಾರೆ. ಹಾಗಾದರೆ ಈ ಚಿತ್ರದಲ್ಲಿನ ಪುನೀತ್ ಪಾತ್ರಕ್ಕೆ ಧ್ವನಿ ನೀಡುವವರು ಯಾರು? ಈ ಬಗ್ಗೆ ಶಿವರಾಜ್ಕುಮಾರ್ ಮಾತನಾಡಿದ್ದಾರೆ.
ಶಿವರಾಜ್ಕುಮಾರ್ ಧ್ವನಿ ನೀಡಲಿ ಎಂಬ ಆಸೆಯನ್ನು ಅಭಿಮಾನಿಗಳು ವ್ಯಕ್ತಪಡಿಸುತ್ತಿದ್ದಾರೆ. ಆ ಕುರಿತು ತಮ್ಮ ಅಭಿಪ್ರಾಯ ಏನು ಎಂಬುದನ್ನು ಶಿವಣ್ಣ ತಿಳಿಸಿದ್ದಾರೆ. ಈವರೆಗೂ ನನ್ನ ಬಳಿ ಆ ರೀತಿಯ ಯಾವುದೇ ಪ್ರಸ್ತಾಪ ಬಂದಿಲ್ಲ. ಒಂದು ವೇಳೆ ಬಂದರೆ ಖಂಡಿತ ಮಾಡುವುದರಲ್ಲಿ ತಪ್ಪಿಲ್ಲ. ನನ್ನ ತಮ್ಮನಿಗೆ ವಾಯ್ಸ್ ಕೊಡಲು ನನಗೆ ನಿಜವಾಗಿಯೂ ಹೆಮ್ಮೆ ಎನಿಸುತ್ತದೆ ಎಂದು ಶಿವರಾಜ್ಕುಮಾರ್ ಹೇಳಿದ್ದಾರೆ. ಮಾ.17 ಪುನೀತ್ ರಾಜ್ಕುಮಾರ್ ಬರ್ತ್ಡೇ. ಆ ದಿನವೇ ಜೇಮ್ಸ್ ರಿಲೀಸ್ ಮಾಡಬೇಕು ಎಂದು ಚಿತ್ರತಂಡ ಗುರಿ ಇಟ್ಟುಕೊಂಡಿದೆ.