ಶಸ್ತ್ರಚಿಕಿತ್ಸೆಗೊಳಗಾದ ನಟ ಶ್ರೀಮುರಳಿ: ಇನ್ನು ಮೂರು ತಿಂಗಳು ರೆಸ್ಟ್

ಮಂಗಳವಾರ, 17 ಜನವರಿ 2023 (08:40 IST)
ಬೆಂಗಳೂರು: ರೋರಿಂಗ್ ಸ್ಟಾರ್ ಶ್ರೀಮುರಳಿ ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆಗೊಳಗಾಗಿದ್ದು ಇನ್ನು ಮೂರು ತಿಂಗಳು ವಿಶ್ರಾಂತಿ ಪಡೆಯಲಿದ್ದಾರೆ.

ರಾಕ್ ಲೈನ್ ಸ್ಟುಡಿಯೋದಲ್ಲಿ  ಬಘೀರ ಸಿನಿಮಾದ ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ಶ್ರೀಮುರಳಿಗೆ ಗಾಯವಾಗಿತ್ತು. ಈ ಕಾರಣಕ್ಕೆ ಅವರು ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ.

ಇನ್ನು ಮೂರು ತಿಂಗಳು ಶ್ರೀಮುರಳಿ ಶೂಟಿಂಗ್ ನಲ್ಲಿ ಪಾಲ್ಗೊಳ್ಳುವಂತಿಲ್ಲ. ಮನೆಯಲ್ಲಿಯೇ ವಿಶ್ರಾಂತಿ ಪಡೆಯಬೇಕಾಗುತ್ತದೆ. ಶ್ರೀಮುರಳಿ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ