ಸೃಜನ್ ಲೋಕೇಶ್ ಎಲ್ಲಿದ್ದೆ ಇಲ್ಲಿ ತನಕ ಟೀಸರ್ ಎರಡೇ ದಿನದಲ್ಲಿ ಬಿಡುಗಡೆ

ಸೋಮವಾರ, 19 ಆಗಸ್ಟ್ 2019 (09:00 IST)
ಬೆಂಗಳೂರು: ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ತಮ್ಮ ಹೋಂ ಬ್ಯಾನರ್ ಲೋಕೇಶ್ ಪ್ರೊಡಕ್ಷನ್ ನಡಿಯಲ್ಲಿ ನಿರ್ಮಿಸಿರುವ ಎಲ್ಲಿದ್ದೆ ಇಲ್ಲಿ ತನಕ ಸಿನಿಮಾ ಟೀಸರ್ ಎರಡು ದಿನದಲ್ಲಿ ಬಿಡುಗಡೆಯಾಗಲಿದೆ.

 

ಈಗಾಗಲೇ ಸೃಜನ್ ತಮ್ಮ ಸಿನಿಮಾದ ಪಾತ್ರವರ್ಗದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯ ಮಾಡಿಕೊಟ್ಟಿದ್ದಾರೆ. ಸೃಜನ್ ಗೆ ನಾಯಕಿಯಾಗಿ ಈ ಸಿನಿಮಾದಲ್ಲಿ ಹರಿಪ್ರಿಯಾ ನಟಿಸಿದ್ದಾರೆ.

ಅರ್ಜುನ್ ಜನ್ಯ ಚಿತ್ರಕ್ಕೆ ಸಂಗೀತ ನೀಡಿದ್ದು, ತೇಜಸ್ವಿ ನಿರ್ದೇಶನ ಮಾಡಿದ್ದಾರೆ. ವಿಶೇಷವೆಂದರೆ ಈ ಸಿನಿಮಾದಲ್ಲಿ ಗಿರಿಜಾ ಲೋಕೇಶ್ ಕೂಡಾ ಅಭಿನಯಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ