777 ಚಾರ್ಲಿ ಸಿನಿಮಾಗೆ ರಾಜ್ಯ ಸರ್ಕಾರದ ಭರ್ಜರಿ ಕೊಡುಗೆ

ಭಾನುವಾರ, 19 ಜೂನ್ 2022 (09:20 IST)
ಬೆಂಗಳೂರು: ಕಳೆದ ವಾರ ಬಿಡುಗಡೆಯಾಗಿದ್ದ ನಾಯಿ ಮತ್ತು ಮನುಷ್ಯನ ನಡುವಿನ ಸಂಬಂಧ ವಿವರಿಸುವ 777 ಚಾರ್ಲಿ ಸಿನಿಮಾಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ.
 

ರಕ್ಷಿತ್ ಶೆಟ್ಟಿ ನಿರ್ಮಿಸಿ ನಟಿಸಿದ್ದ ಸಿನಿಮಾಗೆ ರಾಜ್ಯ ಸರ್ಕಾರ ತೆರಿಗೆ ವಿನಾಯ್ತಿ ಘೋಷಿಸಿದೆ. ಸಮಾಜಕ್ಕೆ ಉತ್ತಮ ಸಂದೇಶ ಕೊಡುವ ಸಿನಿಮಾಗಳಿಗೆ ಸರ್ಕಾರ ಈ ರೀತಿ ತೆರಿಗೆ ವಿನಾಯ್ತಿ ಘೋಷಿಸುತ್ತದೆ. ಈಗ ಚಾರ್ಲಿಗೂ ಆ ಯೋಗ ಒದಗಿಬಂದಿದೆ.

ಕಳೆದ ವಾರ ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಸಚಿವ ಸಂಪುಟದ ಸದಸ್ಯರಿಗೆ ಚಾರ್ಲಿ ಸಿನಿಮಾದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿತ್ತು. ಈ ವೇಳೆ ಸಿಎಂ ಸಿನಿಮಾ ಬಗ್ಗೆ ಮಾತನಾಡುತ್ತಾ ತಮ್ಮ ಮೆಚ್ಚಿನ ನಾಯಿಯನ್ನು ನೆನೆದು ಕಣ್ಣೀರು ಹಾಕಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ