ಕತ್ರಿನಾ ಕೈಫ್-ವಿಕ್ಕಿ ಕೌಶಾಲ್ ಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿ ಅರೆಸ್ಟ್

ಸೋಮವಾರ, 25 ಜುಲೈ 2022 (16:32 IST)
ಮುಂಬೈ: ಬಾಲಿವುಡ್ ನಟಿ ಕತ್ರಿನಾ ಕೈಫ್ ಗೆ ಮದುವೆಯಾಗುವಂತೆ ಒತ್ತಾಯಿಸಿದ್ದಲ್ಲದೆ, ಸೋಷಿಯಲ್ ಮೀಡಿಯಾದಲ್ಲಿ ಜೀವ ಬೆದರಿಕೆ ಹಾಕಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.

ನಟನೆಯಲ್ಲಿ ಅದೃಷ್ಟ ಪರೀಕ್ಷೆಗಿಳಿದು ಸೋತಿದ್ದ ಮನ್ವಿಂದರ್ ಸಿಂಗ್ ಎಂಬಾತ ಕತ್ರಿನಾಳ ಹುಚ್ಚು ಅಭಿಮಾನಿಯಾಗಿದ್ದ. ಕತ್ರಿನಾ ಜೊತೆಗೆ ಮದುವೆಯಾಗಿದೆ ಎಂಬಂತೆ ಎಡಿಟ್ ಮಾಡಿದ ವಿಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿ ಪೋಸ್ ಕೊಡುತ್ತಿದ್ದ.

ಜೊತೆಗೆ ಕಳೆದ ಕೆಲವು ತಿಂಗಳುಗಳಿಂದ ಕತ್ರಿನಾಗೆ ಜೀವ ಬೆದರಿಕೆ ಹಾಕುತ್ತಿದ್ದ. ಈ ಹಿನ್ನಲೆಯಲ್ಲಿ ಕತ್ರಿನಾ-ವಿಕ್ಕಿ ದಂಪತಿ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಈಗ ಆರೋಪಿಯನ್ನು ಬಂಧಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ