ಆರ್ ಆರ್ ಆರ್ ಸಿನಿಮಾ ಬಿಡುಗಡೆ ತಡೆ ಕೋರಿ ಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿ

ಶುಕ್ರವಾರ, 7 ಜನವರಿ 2022 (10:24 IST)
ಹೈದರಾಬಾದ್: ರಾಜಮೌಳಿ ನಿರ್ದೇಶನದ ಜ್ಯೂ.ಎನ್ ಟಿಆರ್, ರಾಮಚರಣ್ ಪ್ರಮುಖ ಪಾತ್ರವಹಿಸಿರುವ ಆರ್ ಆರ್ ಆರ್ ಸಿನಿಮಾ ಬಿಡುಗಡೆಗೆ ತಡೆ ಕೋರಿ ವಿದ್ಯಾರ್ಥಿನಿಯೊಬ್ಬಳು ಕೋರ್ಟ್ ಮೆಟ್ಟಿಲೇರಿದ್ದಾಳೆ.

ಆಂಧ್ರಪ್ರದೇಶದ ವಿದ್ಯಾರ್ಥಿನಿ ಸೌಮ್ಯ ಎಂಬವರು ತೆಲಂಗಾಣ ಹೈಕೋರ್ಟ್ ನಲ್ಲಿ ಈ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಈ ಸಿನಿಮಾದಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ಅಲ್ಲೂರಿ ಸೀತಾರಾಮ ರಾಜು ಮತ್ತು ಕೊಮ್ಮರಂ ಭೀಮ್ ಪಾತ್ರವಿದೆ. ಆದರೆ ಇವರ ಇತಿಹಾಸವನ್ನು ಇಲ್ಲಿ ತಿರುಚಲಾಗಿದೆ. ಹಾಗಾಗಿ ಸಿನಿಮಾ ರಿಲೀಸ್ ಗೆ ತಡೆಯಾಜ್ಞೆ ನೀಡಬೇಕೆಂದು ಸೌಮ್ಯ ಅರ್ಜಿಯಲ್ಲಿ ಕೋರಿದ್ದಾಳೆ. ಎಲ್ಲಾ ಸರಿ ಹೋಗಿದ್ದರೆ ಇಂದು ಆರ್ ಆರ್ ಆರ್ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ ಕೊವಿಡ್ ಕಾರಣದಿಂದ ಚಿತ್ರ ಬಿಡುಗಡೆ ಮುಂದೂಡಿಕೆಯಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ