ಕೋವಿಡ್ ನಂತರ ಬಹುತೇಕ ಸ್ಟಾರ್ ನಟರು ತಮ್ಮ ಹುಟ್ಟುಹಬ್ಬ ಆಚರಣೆಗೆ ಬ್ರೇಕ್ ಹಾಕಿದ್ದಾರೆ. ಈ ಹಿಂದಿನ ವರ್ಷಗಳಲ್ಲಿ ತಮ್ಮ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ನಟರು ಇತ್ತೀಚಿನ ಎರಡು ವರ್ಷಗಳಿಂದ ಹುಟ್ಟುಹಬ್ಬದಿಂದ ದೂರ ಉಳಿಯುತ್ತಿದ್ದಾರೆ. ಪ್ರೀತಿಯಿಂದ ತಮ್ಮ ಮನೆ ಬಳಿ ಬರುವ ಅಭಿಮಾನಿಗಳಲ್ಲಿ “ದೂರದಿಂದಲೇ ಶುಭ ಹಾರೈಸಿ ಎಂದು ಮನವಿ ಮಾಡಿಕೊಳ್ಳುತ್ತಿದ್ದಾರೆ.