ಮತ್ತೆ ಬಾಲಿವುಡ್ ನಲ್ಲಿ ನಟಿಸುತ್ತಾರಾ ಕಿಚ್ಚ ಸುದೀಪ್

ಮಂಗಳವಾರ, 17 ಜುಲೈ 2018 (07:39 IST)
ಬೆಂಗಳೂರು : ಈಗಾಗಲೇ ಸ್ಯಾಂಡಲ್ ವುಡ್ ಮಾತ್ರವಲ್ಲದೇ ಟಾಲಿವುಡ್, ಮಾಲಿವುಡ್, ಕಾಲಿವುಡ್, ಹಾಲಿವುಡ್ ಹಾಗೂ ಬಾಲಿವುಡ್ ನಲ್ಲೂ ನಟಿಸಿ ಸೈ ಎನಿಸಿಕೊಂಡಿರುವ ನಟ ಸುದೀಪ್ ಅವರಿಗೆ ಇದೀಗ ಮತ್ತೆ ಬಾಲಿವುಡ್ ನಲ್ಲಿ ನಟಿಸುವ ಅವಕಾಶ ಹುಡುಕಿಕೊಂಡು ಬಂದಿದೆಯಂತೆ.


ಹೌದು. ಈ ಹಿಂದೆ ನಟ ಸುದೀಪ್ ಅವರು ನಟ ಸಲ್ಮಾನ್ ಖಾನ್​ ಅವರ ಟೈಗರ್ ಜಿಂದಾ ಹೈ ಚಿತ್ರದಲ್ಲಿ ನಟಿಸಲಿದ್ದಾರೆ ಎನ್ನುವ ಸುದ್ದಿ ಕೇಳಿ ಬಂದಿತ್ತು. ಆದರೆ, ಕಾರಣಾಂತರಗಳಿಂದ ಸುದೀಪ್ ಅವರು ಈ ಚಿತ್ರದಲ್ಲಿ ನಟಿಸಲಿಲ್ಲ. ಆದರೆ ಇದೀಗ  ಸಲ್ಮಾನ್ ಖಾನ್​ ಅವರು  ನಟಿಸುತ್ತಿರುವ ಮತ್ತೊಂದು ಸಿನಿಮಾ  'ದಬಾಂಗ್​ 3' ಯಲ್ಲಿ ನಟಿಸಲು ಆಹ್ವಾನ ಬಂದಿದೆಯಂತೆ.


ಈ ಚಿತ್ರದಲ್ಲಿ ಸುದೀಪ್ ಅವರು ಅಭಿನಯ ಮಾಡಬೇಕೆಂದು ಸ್ವತಃ ಸಲ್ಮಾನ್ ಚಿತ್ರತಂಡಕ್ಕೆ ಸಲಹೆ ಕೊಟ್ಟಿದ್ದಾರಂತೆ. ಮೂಲಗಳ ಪ್ರಕಾರ ಸುದೀಪ್ ಅವರು ಈ ಚಿತ್ರದಲ್ಲಿ ನೆಗೆಟಿವ್ ರೋಲ್​ನಲ್ಲಿ ನಟಿಸಲಿದ್ದಾರಂತೆ. ಆದರೆ, ಇದುವರೆಗೂ ಈ ಕುರಿತು ಸುದೀಪ್ ಅವರು ಇದುವರೆಗೆ  ಯಾವುದೇ ಪ್ರತಿಕ್ರಿಯೆ ನೀಡಿಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ