ಸುದೀಪ್​-ಕುಮಾರ್ ಜಟಾಪಟಿ: ಇಂದು ತೀರ್ಪು

ಶುಕ್ರವಾರ, 11 ಆಗಸ್ಟ್ 2023 (16:20 IST)
ನಟ ಸುದೀಪ್ ಹಾಗೂ ನಿರ್ಮಾಪಕ ಎಂ.ಎನ್​​ ಕುಮಾರ್ ನಡುವೆ ನಡೆದ ಜಟಾಪಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ACMM ಕೋರ್ಟ್​​ನಿಂದ ಇಂದು ತೀರ್ಪು ಪ್ರಕಟವಾಗಲಿದೆ. ನಟ ಕಿಚ್ಚ ಸುದೀಪ್, ನಿರ್ಮಾಪಕ ಕುಮಾರ್ ವಿರುದ್ಧ ಮಾನಹಾನಿ ಮೊಕದ್ದಮೆ ಹೂಡಿದ್ರು. ಅದರನ್ವಯ ನಿನ್ನೆ ನ್ಯಾಯಾಲಯ ಸುದೀಪ್ ಹೇಳಿಕೆ ದಾಖಲಿಸಿಕೊಂಡಿತ್ತು. ಸುದೀಪ್ ಕೋರ್ಟ್​​​ಗೆ ಹಾಜರಾಗಿ ಕುಮಾರ್ ಹಾಗೂ ಸುರೇಶ್ ವಿರುದ್ಧ ಹೇಳಿಕೆ ಕೊಟ್ಟಿದ್ದಾರೆ. ನಾನು ಸಿನಿ ಇಂಡಸ್ಟ್ರಿಯಲ್ಲಿ 22 ವರ್ಷ ಗಳಿಸಿದ್ದ ವರ್ಚಸ್ಸಿಗೆ ಧಕ್ಕೆಯಾಗಿದೆ. ರಾಜೀ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಕೋರ್ಟ್ ಮುಂದೆ ಹೇಳಿಕೆ ಕೊಟ್ಟಿದ್ದಾರೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ