ಸೂಪರ್ ಸ್ಟಾರ್ ವಿಜಯ್‌ರೊಂದಿಗೆ ಸನ್ನಿ ಲಿಯೋನ್ ಹೆಜ್ಜೆ ಹಾಕಲಿದ್ದಾರಾ?

ಗುರುವಾರ, 28 ಡಿಸೆಂಬರ್ 2023 (11:39 IST)
ವಿಜಯ್ ಮತ್ತು ನಿರ್ದೇಶಕ ಎ.ಆರ್.ಮುರುಗದಾಸ್ ಜೋಡಿ ಮತ್ತೆ ಚಿತ್ರರಂಗದಲ್ಲಿ ಭರ್ಜರಿ ಎಂಟ್ರಿ ಕೊಟ್ಟಿದೆ. ಇದಕ್ಕಿಂತ ಮೊದಲು , ಚಿತ್ರದ ವಿಶೇಷ ಹಾಡಿನಲ್ಲಿ ಸನ್ನಿ ಲಿಯೋನ್ ನೃತ್ಯ ಮಾಡಲಿದ್ದಾರೆ ಎನ್ನುವ ವರದಿಗಳು ಹರಡಿದ್ದವು. ಆದರೆ, ಇವೆಲ್ಲಾ ಉಹಾಪೋಹದ ವರದಿಗಳು ಎಂದು ಚಿತ್ರ ನಿರ್ಮಾಪಕರು ಸ್ಪಷ್ಟಪಡಿಸಿದ್ದಾರೆ. 
 
ತಮಿಳು ಸಿನೆಮಾ ಸೂಪರ್ ಸ್ಟಾರ್ ವಿಜಯ್ ನಟನೆಯ ಚಿತ್ರದಲ್ಲಿ ಹಾಟ್ ನಟಿ ಸನ್ನಿ ಲಿಯೋನ್ ನಟಿಸುತ್ತಿದ್ದಾರೆ ಎನ್ನುವ ವರದಿಗಳನ್ನು ಚಿತ್ರ ನಿರ್ಮಾಪಕರು ತಳ್ಳಿಹಾಕಿದ್ದಾರೆ.
 
ಇಳಯಾ ದಳಪತಿ ವಿಜಯ್ ಚಿತ್ರದ ಶೂಟಿಂಗ್‌ನಲ್ಲಿ ಬಿಜಿಯಾಗಿದ್ದು ಚಿತ್ರದ ಟೀಸರ್ ಬಿಡುಗಡೆಯಾಗಲಿದೆ. ಚಿತ್ರದ ಬಿಡುಗಡೆಯ ದಿನಾಂಕ ನಿಗದಿಪಡಿಸಿಲ್ಲ. ವಿಜಯ್ ಅಭಿಮಾನಿಗಳಿಗೆ ಸರ್‌ಪ್ರೈಸ್ ಕಾದಿದೆ ಎಂದು ತಿಳಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ