ರಜನಿಕಾಂತ್ ಹೊಸ ಪಕ್ಷ ಸ್ಥಾಪನೆ ಯಾವಾಗ ಗೊತ್ತಾ?

ಶನಿವಾರ, 27 ಮೇ 2017 (18:05 IST)
ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಬರುತ್ತಾರೆ ಎಂಬ ಸುಳಿವು ಈಗಾಗಲೇ ಅವರ ಬಾಯಿಯಿಂದಲೇ ಸಿಕ್ಕಿದೆ. ಹಾಗಿದ್ದರೆ ಯಾವಾಗ ಎನ್ನುವ ಪ್ರಶ್ನೆಗೆ ಅವರ ಸಹೋದರ ಉತ್ತರ ಕೊಟ್ಟಿದ್ದಾರೆ.

 
ಜುಲೈ ಅಂತ್ಯದ ವೇಳೆಗೆ ರಜನಿ ಹೊಸ ಪಕ್ಷ ಸ್ಥಾಪನೆ ಮಾಡುವ ಘೋಷಣೆ ಮಾಡಬಹುದು ಎಂದು ಅವರ ಸಹೋದರ ಸತ್ಯನಾರಾಯಣ ರಾವ್ ಗಾಯಕ್ ವಾಡ್ ಹೇಳಿರುವುದಾಗಿ ಮಾಧ್ಯಮವೊಂದು ಪ್ರಕಟಿಸಿದೆ.

ರಜನಿ ರಾಜಕೀಯಕ್ಕೆ ಬರುವುದಕ್ಕೆ ಪೂರ್ವಭಾವಿಯಾಗಿ ಈಗಾಗಲೇ ಅಭಿಮಾನಿಗಳ ಜತೆ ಸಂವಹನ ನಡೆಸಿದ್ದಾರೆ. ಅವರು ರಾಜಕೀಯಕ್ಕೆ ಬರಬೇಕೆನ್ನುವುದು ಅಭಿಮಾನಿಗಳ ಬಯಕೆಯೂ ಆಗಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ವೆಬ್ದುನಿಯಾವನ್ನು ಓದಿ