Darshan Thoogudeepa: ನಟ ದರ್ಶನ್ ಗೆ ಬಿಗ್ ಶಾಕ್ ನೀಡಿದ ಸುಪ್ರೀಂಕೋರ್ಟ್: ಮತ್ತೆ ಜೈಲಿಗೆ ದಾಸ

Krishnaveni K

ಗುರುವಾರ, 14 ಆಗಸ್ಟ್ 2025 (11:07 IST)
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ನಟ ದರ್ಶನ್ ಗೆ ಸುಪ್ರೀಂಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಜಾಮೀನು ರದ್ದು ಮಾಡಿ ಆದೇಶ ನೀಡಿದೆ. ಇದರಿಂದಾಗಿ ದಾಸ ದರ್ಶನ್ ಹಾಗೂ ಪ್ರಮುಖ ಆರೋಪಿಗಳು ಮತ್ತೆ ಜೈಲು ಸೇರಬೇಕಿದೆ.

ಕರ್ನಾಟಕ ಹೈಕೋರ್ಟ್ ಪ್ರಮುಖ ಆರೋಪಿಗಳಿಗೆ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಪೊಲೀಸರು ಸುಪ್ರೀಂಕೋರ್ಟ್ ಮೇಲ್ಮನವಿ ಸಲ್ಲಿಸಿದ್ದರು. ಈಗಾಗಲೇ ಸುಪ್ರೀಂಕೋರ್ಟ್ ಎರಡೂ ಕಡೆ ವಕೀಲರ ವಾದ-ವಿವಾದ ಆಲಿಸಿದ ಕೋರ್ಟ್ ತೀರ್ಪು ಕಾಯ್ದಿರಿಸಿತ್ತು.

ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಪ್ರಮುಖ ಆರೋಪಿಗಳ ಹಿನ್ನಲೆ ಕೇಳಿತ್ತು. ಬಳಿಕ ಹೈಕೋರ್ಟ್ ಮಾಡಿದ ತಪ್ಪನ್ನು ನಾವು ಮಾಡಲ್ಲ ಎಂದು ಹೇಳಿತ್ತು. ಇಂದು ತೀರ್ಪು ನೀಡಿದ ಸುಪ್ರೀಂಕೋರ್ಟ್ ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದಿದ್ದು ಜಾಮೀನು ರದ್ದುಗೊಳಿಸಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ