ನವದೆಹಲಿ: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ದರ್ಶನ್ ಸೇರಿದಂತೆ ಪ್ರಮುಖ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಪೊಲೀಸರು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪವಿತ್ರಾ ಗೌಡ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.
ಇಂದು ಸರ್ಕಾರೀ ವಕೀಲರಿಂದ ನ್ಯಾಯಮೂರ್ತಿಗಳು ಪ್ರಕರಣದ ಸಂಪೂರ್ಣ ವಿವರಣೆಯನ್ನು ಮತ್ತು ತದನಂತರದ ಬೆಳವಣಿಗೆಗಳ ಬಗ್ಗೆ ಕೇಳಿ ತಿಳಿದುಕೊಂಡಿದ್ದಾರೆ. ಬಳಿಕ ದರ್ಶನ್ ಪರ ವಕೀಲರು ತಮ್ಮ ವಾದ ಮಂಡಿಸಿದ್ದಾರೆ. ಇನ್ನು ಪವಿತ್ರಾ ಗೌಡ ಪರ ವಕೀಲರು ವಾದ ಮಂಡಿಸುವಾಗ ಸುಪ್ರೀಂ ನ್ಯಾಯಾಧೀಶರು ಅಸಮಾಧಾನ ಹೊರಹಾಕಿದ್ದಾರೆ.
ಇಡೀ ಪ್ರಕರಣ ನಡೆದಿದ್ದೇ ನಿಮ್ಮಿಂದ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇನ್ನು ಎರಡೂ ಕಡೆಯ ವಾದ-ವಿವಾದ ಆಲಿಸಿದ ನ್ಯಾಯಾಧೀಶರು ತೀರ್ಪು ಕಾಯ್ದಿರಿಸಿದ್ದಾರೆ. ಒಂದು ವಾರದ ಬಳಿಕ ಈ ಬಗ್ಗೆ ತೀರ್ಪು ಪ್ರಕಟಿಸುವ ನಿರೀಕ್ಷೆಯಿದೆ.
ಗಮನಿಸಬೇಕಾದ ಅಂಶವೆಂದರೆ ಹೈಕೋರ್ಟ್ ಜಾಮೀನು ನೀಡಿರುವ ಬಗ್ಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಅವರು ಮಾಡಿದ ತಪ್ಪು ನಾವು ಮಾಡಲು ಸಾಧ್ಯವಿಲ್ಲ ಎಂದು ಹೇಳಿದೆ. ಹೈಕೋರ್ಟ್ ವಿವೇಚನೆಯ ಬಳಕೆ ಮತ್ತು ಪುರಾವಣೆಗಳನ್ನು ಪರಿಗಣಿಸುವಲ್ಲಿ ವಿಫಲವಾಗಿರುವುದನ್ನು ಬೊಟ್ಟು ಮಾಡಿದೆ. ಈ ಕಾರಣಕ್ಕೆ ಸುಪ್ರೀಂಕೋರ್ಟ್ ಜಾಮೀನು ರದ್ದುಪಡಿಸಿದರೂ ಅಚ್ಚರಿಯಿಲ್ಲ ಎನ್ನಬಹುದು.