ಬೆಂಗಳೂರು: ಸೆಬಾಸ್ಟಿನ್ ಡೇವಿಡ್ ಅವರು ಆ್ಯಕ್ಷನ್ ಕಟ್ ಹೇಳುತ್ತಿರುವ ಸಿನಿಮಾದಲ್ಲಿ ಬಿಗ್‌ಬಾಸ್ ಖ್ಯಾತಿಯ, ಬೆಂಕಿ ಎಂದೇ ಕರೆಸಿಕೊಳ್ಳುವ ತನಿಷಾ ಕುಪ್ಪಂಡ ಅವರು ನಟಿಸುತ್ತಿದ್ದಾರೆ. ಇನ್ನೂ ವಿಶೇಷ ಏನೆಂದರೆ ಈ ಸಿನಿಮಾಗೆ ಪೆನ್‌ಡ್ರೈವ್ ಎಂದು ಟೈಟಲ್ ಇಡಲಾಗಿದೆ.
ಇನ್ನೂ ಈ ಸಿನಿಮಾಗೂ ಪ್ರಸ್ತುತ ರಾಜ್ಯದಲ್ಲಿ ನಡೆಯುತ್ತಿರುವ ಘಟನೆಗೂ ಯಾವುದೇ ಸಂಬಂಧವಿಲ್ಲ ಎಂದು ನಿರ್ದೇಶಕ ಸೆಬಾಸ್ಟಿನ್ ಡೇವಿಡ್ ಅವರು ಸ್ಪಷ್ಟಪಡಿಸಿದರು. ಚಿತ್ರದ ಶೀರ್ಷಿಕೆಯನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್ ಎಂ ಸುರೇಶ್, ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ್ ಕೆ ವಿಶ್ವನಾಥ್ ಅವರು ಅನಾವರಣಗೊಳಿಸಿ, ಚಿತ್ರತಂಡಕ್ಕೆ ಶುಭಕೋರಿದರು.
ಈ ಚಿತ್ರವು ಪೆನ್‌ಡ್ರೈವ್ ಸುತ್ತಾ ಹೆಣೆದಿದ್ದು, ಆದ್ದರಿಂದ ಪೆನ್‌ಡ್ರೈವ್ ಎಂಬ ಟೈಟಲ್ ನೀಡಲಾಗಿದೆ.. ಲಯನ್ ಆರ್ ವೆಂಕಟೇಶ್ ಅವರ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದು, ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ. ಹೆಚ್ಚಿನ ಚಿತ್ರೀಕರಣ ಬೆಂಗಳೂರಿನಲ್ಲೇ ನಡೆಯಲಿದೆ.
ಚಿತ್ರದಲ್ಲಿ ತನಿಷಾ ಕುಪ್ಪಂಡ ಸೇರಿದಂತೆ ರಾಧಿಕಾ ರಾಮ್, ಸಂಜನಾ ನಾಯ್ಡು, ಅರ್ಚನ, ರೇಣುಕಾ, ಗೀತಾ, ಭಾಗ್ಯ, ಗೀತಪ್ರಿಯ, ಕರಿಸುಬ್ಬು ಅವರ ತಾರಾಬಳಗವಿದೆ. ಚಿತ್ರಕ್ಕೆ ವಿ.ನಾಗೇಂದ್ರ ಪ್ರಸಾದ್ ಗೀತರಚನೆ ಹಾಗೂ ಸಂಗೀತ ನಿರ್ದೇಶನ ಮಾಡಲಿದ್ದಾರೆ.