ಹೈದರಾಬಾದ್ : ಟಾಲಿವುಡ್ ನಟ ವಿಜಯ್ ದೇವರಕೊಂಡ ಮತ್ತು ಬಾಲಿವುಡ್ ನಟಿ ಅನನ್ಯಾ ಪಾಂಡೆ ಪ್ರಸ್ತುತ ದೇಶಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿರುವ ರೊಮ್ಯಾಂಟಿಕ್ , ಸ್ಪೋರ್ಟ್ಸ್ ಚಿತ್ರ ಲಿಗರ್ ನಲ್ಲಿ ಕೆಲಸ ಮಾಡುತ್ತಿದ್ದಾರೆ.
ಪುರಿ ಜಗನ್ನಾಥ್ ನಿರ್ದೇಶನದಲ್ಲಿ ಮುಂಬೈನಲ್ಲಿ ಲೀಗರ್ ಚಿತ್ರದ ಚಿತ್ರೀಕರಣ ನಡೆಯುತ್ತಿತ್ತು. ಆದರೆ ಕೊರೊನಾ ವೈರಸ್ 2ನೇ ಅಲೆಯಿಂದಾಗಿ ಈಗ ಚಿತ್ರೀಕರಣ ಸ್ಥಗಿತಗೊಂಡಿದೆ. ಬಾಲಿವುಡ್ ಪಾದಾರ್ಪಣೆ ಮಾಡುತ್ತಿರುವ ನಟ ಚಿತ್ರದ ಚಿತ್ರೀಕರಣ ವಿಳಂಬವಾಗುತ್ತಿರುವುದರಿಂದ ತುಂಬಾ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.
ಮುಂಬೈನಲ್ಲಿ ಹಲವಾರು ಸಮಸ್ಯೆಗಳಿಂದ ಚಿತ್ರ ಮುಂದುವರಿಯುತ್ತಿಲ್ಲ. ಇದರಿಂದ ಅವರು ಹೊಸ ಚಿತ್ರಗಳನ್ನು ಪ್ರಾರಂಭಿಸಲು ಆಗುತ್ತಿಲ್ಲ. ಹಾಗಾಗಿ ಅವರು ಆದಷ್ಟು ಬೇಗ ಸೆಟ್ ಗೆ ಮರಳಲು ಬಯಸುತ್ತಿದ್ದಾರೆ ಎನ್ನಲಾಗಿದೆ.