ಕೊರೊನಾ ಸೋಂಕಿಗೆ ಒಳಗಾದ ನಟಿ ನಿಕ್ಕಿ ಗಲ್ರಾನಿ

ಶುಕ್ರವಾರ, 14 ಆಗಸ್ಟ್ 2020 (11:41 IST)
ಹೈದರಾಬಾದ್ : ಟಾಲಿವುಡ್ ನಟಿ ನಿಕ್ಕಿ ಗಲ್ರಾನಿ ಅವರಿಗೆ ಕೊರೊನಾ ಸೋಂಕು ತಗುಲಿರುವುದಾಗಿ ತಿಳಿದುಬಂದಿದೆ.

ಇಡೀ ವಿಶ್ವದಾದ್ಯಂತ ಕೊರೊನಾ ವೈರಸ್ ಅಟ್ಟಹಾಸ ಮೇರೆಯುತ್ತಿದ್ದು, ಸಿನಿಮಾ ರಂಗದ ಹಲವರು ಕೊರೊನಾ ಸೋಂಕಿಗೆ ಒಳಗಾಗಿದ್ದರು. ಇದೀಗ ನಟಿ ನಿಕ್ಕಿ ಗಲ್ರಾನಿ ಅವರಿಗೆ ಕೊರೊನಾ ಸೋಂಕು ತಗುಲಿದೆಯಂತೆ. ಈ ಬಗ್ಗೆ ನಟಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಕಳೆದ ವಾರ ಅವರಿಗೆ  ಕೊರೊನಾ ಪಾಸಿಟಿವ್ ಬಂದಿದ್ದು, ಚಿಕಿತ್ಸೆ ಪಡೆಯುತ್ತಿದ್ದ ಕಾರಣ ಅವರ ಆರೋಗ್ಯ ಸ್ಥಿರವಾಗಿದೆ ಎಂದಿದ್ದಾರೆ. ಹಾಗೇ ಹೊರಗಡೆ ಹೋದಾಗ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ನಟಿ ಮನವಿ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ