ಆಚಾರ್ಯ ಚಿತ್ರದಲ್ಲಿ ರಾಮ್ ಚರಣ್ ಗೆ ಜೋಡಿಯಾಗಿ ನಟಿಸಲಿದ್ದಾರೆ ಈ ನಟಿ

ಸೋಮವಾರ, 25 ಜನವರಿ 2021 (10:55 IST)
ಹೈದರಾಬಾದ್ : ಮೆಗಾಸ್ಟಾರ್ ಚಿರಂಜೀವಿ ಅವರ ಆಚಾರ್ಯ ಚಿತ್ರ ನಿರ್ದೇಶಕ ಕೊರಟಾಲ ಶಿವ ಅವರ ನಿರ್ದೇಶನದಲ್ಲಿ ಮೂಡಿಬರಲಿದೆ. ಈ ಚಿತ್ರದಲ್ಲಿ ರಾಮ್ ಚರಣ್ ಅವರು ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ರಾಮ್ ಚರಣ್ ಅವರು ಸುಮಾರು 40 ನಿಮಿಷಗಳ ಕಾಲ ನಡೆಯುವ ಸಿದ್ದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.  ಈ ಚಿತ್ರದಲ್ಲಿ ಚಿರಂಜೀವಿ ಅವರ ಜೊತೆ ಕಾಜಲ್ ಅಗರ್ವಾಲ್ ಅವರು ಜೋಡಿಯಾಗಿ ನಟಿಸಲಿದ್ದಾರೆ ಎಂಬುದು ಎಲ್ಲರಿಗೂ ತಿಳಿದೆ ಇದೆ.

ಇತ್ತೀಚಿನ ಮಾಹಿತಿ ಪ್ರಕಾರ ಈ ಚಿತ್ರದಲ್ಲಿ ರಾಮ್ ಚರಣ್ ಅವರಿಗೆ ಜೋಡಿಯಾಗಿ ಪೂಜಾ ಹೆಗ್ಡೆ ನಟಿಸಲಿದ್ದಾರಂತೆ. ಮೊದಲು ರಶ್ಮಿಕಾ ಮಂದಣ್ಣ ಈ ಚಿತ್ರದಲ್ಲಿ ರಾಮ್ ಚರಣ್ ಅವರಿಗೆ ಜೋಡಿಯಾಗಿ ಆಯ್ಕೆಯಾಗಿದ್ದು, ಆದರೆ ಡೇಟ್ಸ್ ಸರಿಹೊಂದದ ಕಾರಣ ಪೂಜಾ ಅವರನ್ನು ಸಂಪರ್ಕಿಸಲಾಗಿದ್ದು ಅವರು ಓಕೆ ಎಂದಿದ್ದಾರಂತೆ. ಹಾಗಾಗಿ ರಾಮ್ ಚರಣ್ ದೃಶ್ಯಗಳನ್ನು ಸದ್ಯದಲ್ಲಿಯೇ ಚಿತ್ರೀಕರಿಸಲಾಗುವುದು ಎನ್ನಲಾಗಿದೆ.  

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ