ಪೊಲೀಸರೇ ವಿರುದ್ಧವೇ ಸಮರ ಸಾರಿದ ‘ಅಂತ್ಯ’ ಚಿತ್ರತಂಡ

ಗುರುವಾರ, 30 ಆಗಸ್ಟ್ 2018 (08:33 IST)
ಬೆಂಗಳೂರು : ಸಿಂಗರ್ ಚಂದನ್ ಶೆಟ್ಟಿ ಹಾಡಿದ ‘ಅಂತ್ಯ’ ಸಿನಿಮಾದ ಗಾಂಜಾ ಕುರಿತಾದ ಹಾಡು ಮಾದಕ ವಸ್ತುಗಳ ಸೇವನೆಗೆ ಪ್ರಚೋದನೆ ನೀಡುತ್ತದೆ ಎಂದು ಸಿಸಿಬಿ ಪೊಲೀಸರು ಆರೋಪ ಮಾಡಿರುವ ಹಿನ್ನಲೆಯಲ್ಲಿ ಇದೀಗ ಈ ಹಾಡಿನ ರಚನೆಕಾರ ಹಾಗು ಚಿತ್ರದ ನಿರ್ಮಾಪಕ ಪೊಲೀಸರೇ ವಿರುದ್ಧವೇ ದೂರು ನೀಡಲು ಮುಂದಾಗಿದ್ದಾರೆ.


‘ಅಂತ್ಯ’ ಸಿನಿಮಾದ ಗಾಂಜಾ ಕುರಿತಾದ ಹಾಡನ್ನು ಸಿಂಗರ್ ಚಂದನ್ ಶೆಟ್ಟಿ ಹಾಡಿದ ಕಾರಣ ಸಿಸಿಬಿ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ಚಂದನ್ ಶೆಟ್ಟಿಗೆ ಸಮನ್ಸ್ ಜಾರಿ ಮಾಡಿದ್ದರು. ನಂತರ ಚಂದನ್ ಪೊಲೀಸರ ಮುಂದೆ ಹಾಜರಾಗಿ ತಾವು ಹಾಡು ಹಾಡಿದ್ದು ತಪ್ಪು ಎಂದು ಒಪ್ಪಿಕೊಂಡಿದ್ದಾರೆ. ಆದರೆ ಹಾಡಿನ ಸಾಹಿತ್ಯ ರಚನಕಾರರಾದ ಮುತ್ತು ಮತ್ತು ನಿರ್ಮಾಪಕ ಅವಿನಾಶ್ ಸಿಸಿಬಿ ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.


“ನಮ್ಮ ಫಿಲ್ಮ್ ಸೆನ್ಸಾರ್ ಬೋರ್ಡ್ ಅಂತಿಮ, ಯೂಟ್ಯೂಬ್‍ನಲ್ಲಿ ಈ ಸಾಂಗ್ಸ್ ತೆಗಿಯಿರಿ ಅಂತಾ ಹೇಳೋದು ಪೊಲೀಸರ ಕೆಲಸವಲ್ಲ. ಹಾಗಿದ್ರೇ ಎಲ್ಲಾ ಭಾಷೆಯ ನಶೆಯ ಹಾಡುಗಳನ್ನು ತೆಗೆಸಲಿ” ಎಂದು ‘ಅಂತ್ಯ’ ಚಿತ್ರತಂಡ  ಪೊಲೀಸರ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ಕೊಡಲು ನಿರ್ಧರಿಸಿದೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ