ಲಿಗರ್ ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆ

ಶುಕ್ರವಾರ, 12 ಫೆಬ್ರವರಿ 2021 (12:47 IST)
ಹೈದರಾಬಾದ್ : ರೌಡಿ ವಿಜಯ್ ದೇವರಕೊಂಡ ಅಭಿನಯದ ನಿರ್ದೇಶಕ ಪುರಿ ಜಗನ್ನಾಥ್ ನಿರ್ದೆಶನದ ಮೊದಲ ಪ್ಯಾನ್ ಇಂಡಿಯಾ ಚಿತ್ರ ‘ಲಿಗರ್’ ಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಇದೀಗ ಚಿತ್ರದ ಬಿಡುಗಡೆಯ ದಿನಾಂಕ ಘೋಷಿಸಲಾಗಿದೆ.

ಈ ಚಿತ್ರದ ಪೋಸ್ಟರ್ ಇತ್ತೀಚೆಗೆ ರಿಲೀಸ್ ಆಗಿದ್ದು, ಇದರಲ್ಲಿ ವಿಜಯ್ ದೇವರಕೊಂಡ ಅವರ ಉಗ್ರ ನೋಟವು ಪ್ರೇಕ್ಷಕರಲ್ಲಿ ಆಸಕ್ತಿಯನ್ನುಂ ಹುಟ್ಟುಹಾಕಿದೆ. ಇದೀಗ ಚಿತ್ರ ಬಿಡುಗಡೆಯ ದಿನಾಂಕ ಘೋಷಿಸಲಾಗಿದ್ದು, ಸೆಪ್ಟೆಂಬರ್ 9ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ ಎಂದು ತಿಳಿಸಲಾಗಿದೆ. ಈ ಚಿತ್ರ ಹಿಂದಿ, ತೆಲುಗು, ತಮಿಳು , ಕನ್ನಡ ಮತ್ತು ಮಲಯಾಳಂನಲ್ಲಿ ಬಿಡುಗಡೆಯಾಗಲಿದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ