ಮುಂದೂಡಿದ್ದ ಶಿವಣ್ಣ, ಉಪೇಂದ್ರ, ರಾಜ್‌ ಬಿಶೆಟ್ಟಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

Sampriya

ಶುಕ್ರವಾರ, 22 ಆಗಸ್ಟ್ 2025 (18:00 IST)
Photo Credit X
ಬೆಂಗಳೂರು: ಸಂಗೀತ ನಿರ್ದೇಶಕ ಅರ್ಜುನ್ ಜನ್ಯ  ಮೊದಲ ಬಾರೀ ನಿರ್ದೇಶನ ಮಾಡಿರುವ ನಟ ಶಿವರಾಜ್‌ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್‌ ಬಿ ಶೆಟ್ಟಿ ಅಭಿನಯದ ಚಿತ್ರ 45 ಸಿನಿಮಾ ರಿಲೀಸ್‌ಗೆ ದಿನ ಫಿಕ್ಸ್ ಆಗಿದೆ. 

ಸೂರಜ್ ಪ್ರೊಡಕ್ಷನ್ ಲಾಂಛನದಲ್ಲಿ ರಮೇಶ್ ರೆಡ್ಡಿ ಅವರ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ಆಗಸ್ಟ್ 15ರಂದು ಬಿಡುಗಡೆಯಾಗಬೇಕಿತ್ತು. 

ಆದರೆ ಚಿತ್ರದ ಸಿಜಿ ವರ್ಕ್ ಇನ್ನೂ ಪೂರ್ಣವಾಗಿರದ ಹಿನ್ನೆಲೆಯಲ್ಲಿ ಚಿತ್ರ ಬಿಡುಗಡೆಯನ್ನು ಮುಂದೂಡಿದ್ದು, ಇದೀಗ ಸಿನಿಮಾ ಬಿಡುಗಡೆಗೆ ದಿನಾಂಕ ಫಿಕ್ಸ್ ಮಾಡಲಾಗಿದೆ. 

ಡಿ.25 ರಂದು `45′ ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ಬಿಡುಗಡೆ ದಿನಾಂಕವನ್ನು ನಿರ್ಮಾಪಕ ರಮೇಶ್ ರೆಡ್ಡಿ ಹಾಗೂ ನಿರ್ದೇಶಕ ಅರ್ಜುನ್ ಜನ್ಯ ಘೋಷಣೆ ಮಾಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ