ಪವನ್ ಕಲ್ಯಾಣ್ ‘ವಕೀಲ್ ಸಾಬ್’ ಚಿತ್ರದ ಟ್ರೈಲರ್ ಬಿಡುಗಡೆಯ ದಿನಾಂಕ ನಿಗದಿ

ಗುರುವಾರ, 25 ಮಾರ್ಚ್ 2021 (09:56 IST)
ಹೈದರಾಬಾದ್ : ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರ  ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದ ‘ವಕೀಲ್ ಸಾಬ್ ಚಿತ್ರದ ಟ್ರೈಲರ್ ಬಿಡುಗಡೆಯ ದಿನಾಂಕ ನಿಗದಿಯಾಗಿದೆ.

ಚಕೀಲ್ ಸಾಬ್ ಚಿತ್ರದ ಟ್ರೈಲರ್ ನ್ನು ಇದೇ ಮಾರ್ಚ್ 29ರಂದು ಬಿಡುಗಡೆ ಮಾಡಲು ನಿರ್ಮಾಪಕರು ನಿರ್ಧರಿಸಿದ್ದಾರೆ. ಇದರಲ್ಲಿ ಪವನ್ ಕಲ್ಯಾಣ್ ಅವರು ಕೋರ್ಟ್ ರೂಂನಲ್ಲಿ ವಕೀಲ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದು ಮೂವರು ಮಹಿಳೆಯರ ಕಥೆಯನ್ನು ಹೇಳುತ್ತದೆ.

ಈ ಚಿತ್ರದಲ್ಲಿ ನಟಿ ಶ್ರುತಿ ಹಾಸನ್ ಅವರು ಪವನ್ ಕಲ್ಯಾಣ್ ಅವರಿಗೆ ಜೋಡಿಯಾಗಿ ನಟಿಸಲಿದ್ದಾರೆ. ಈ ಚಿತ್ರ ಏಪ್ರಿಲ್ 9ರಂದು ತೆರೆಗೆ ಬರಲಿದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ