ಅರ್ಜುನ್ ಸರ್ಜಾ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಮಹಿಳಾ ಆಯೋಗ

ಮಂಗಳವಾರ, 30 ಅಕ್ಟೋಬರ್ 2018 (11:18 IST)
ಬೆಂಗಳೂರು : ನಟಿ ಶೃತಿ ಹರಿಹರನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಅರ್ಜುನ್ ಸರ್ಜಾ ವಿರುದ್ಧ  ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.


ಈಗಾಗಲೇ ಶೃತಿ ಹರಿಹರನ್ ಅವರು ಅರ್ಜುನ್ ಸರ್ಜಾ ವಿರುದ್ಧಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗಯಲ್ಲಿ ದೂರು ದಾಖಲಿಸಿದ್ದರು. ಇದೀಗ ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಈ ಬಗ್ಗೆ ತನಿಖೆ ಮಾಡಿ ನಮಗೆ ವರದಿ ಸಲ್ಲಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದೆ ಎಂಬುದಾಗಿ ತಿಳಿದುಬಂದಿದೆ.


ಹಾಗೇ ಈ ಬಗ್ಗೆ ಶೃತಿ ಹರಿಹರನ್ ಜೊತೆಯೂ ದೂರವಾಣಿ ಸಂಪರ್ಕ ಮಾಡಿ ಮಾತುಕತೆಯನ್ನು ನಡೆಸಿದ ಮಹಿಳಾ ಆಯೋಗ ಅರ್ಜುನ್ ಸರ್ಜಾ ಅವರಿಗೆ 3 ದಿನಗಳ ಕಾಲವಕಾಶ ಕೊಟ್ಟು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೂಡ ನೀಡಿದೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ