ಬೆಂಗಳೂರು: ಹಿರಿಯ ರಂಗಭೂಮಿ ಹಾಗೂ ಸಿನಿಮಾ ನಟ ಏಣಗಿ ಬಾಳಪ್ಪ ವಯೋಸಹಜ ಖಾಯಿಲೆಯಿಂದಾಗಿ ಮೃತರಾಗಿದ್ದಾರೆ.
ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಏಣಗಿ ಗ್ರಾಮದಲ್ಲಿ ಬಾಳಪ್ಪ ಮೃತಪಟ್ಟಿದ್ದಾರೆ. ಅವರಿಗೆ 103 ವರ್ಷ ವಯಸ್ಸಾಗಿತ್ತು. ರಂಗಭೂಮಿ, ಹಿರಿತೆರೆಯಲ್ಲಿ ಸಕ್ರಿಯರಾಗಿದ್ದರಲ್ಲದೆ, ಸ್ವಾತಂತ್ರ್ಯ ಹೋರಾಟದಲ್ಲೂ ಭಾಗಿಯಾಗಿದ್ದರು. ಲವ ಕುಶ ನಾಟಕದ ಮೂಲಕ ರಂಗಭೂಮಿಗೆ ಪದಾರ್ಪಣೆ ಮಾಡಿದ್ದರು.
ಜನುಮದ ಜೋಡಿ, ಗಡಿಬಿಡಿ ಕೃಷ್ಣ ಮುಂತಾದ ಸಿನಿಮಾಗಳಲ್ಲೂ ಪಾತ್ರ ಮಾಡಿದ್ದರು. ನಾಳೆ ಹುಟ್ಟೂರು ಏಣಗಿಯಲ್ಲಿ ಅಂತ್ಯ ಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ಹೇಳಿವೆ.