ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ ಕಳ್ಳತನ

Krishnaveni K

ಶನಿವಾರ, 13 ಸೆಪ್ಟಂಬರ್ 2025 (14:00 IST)
ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ ಕಳ್ಳತನವಾಗಿದೆ ಎಂದು ವರದಿಯಾಗಿದ್ದು, ಈ ಸಂಬಂಧ ಅವರು ಚೆನ್ನಮ್ಮನಕೆರೆ ಅಚ್ಚುಕಟ್ಟೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ವಿಜಯಲಕ್ಷ್ಮಿ ವಾಸವಾಗಿರುವ  ಹೊಸಕೆರೆಹಳ್ಳಿಯ ಪ್ರೆಸ್ಟೀಜ್ ಅಪಾರ್ಟ್ ಮೆಂಟ್ ನಲ್ಲಿ ಕಳ್ಳತನವಾಗಿದೆ. ಸುಮಾರು 3 ಲಕ್ಷ ರೂ. ನಗದು ಕಳ್ಳತನವಾಗಿದೆ ಎಂದು ವಿಜಯಲಕ್ಷ್ಮಿ ಮ್ಯಾನೇಜರ್ ನಾಗರಾಜ್ ಪೊಲೀಸರಿಗೆ ದೂರು ನೀಡಿದ್ದಾರೆ.

ವಿಜಯಲಕ್ಷ್ಮಿ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮನೆಗೆಲಸದವರ ಮೇಲೆಯೇ ಅನುಮಾನವಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದು ತನಿಖೆ ನಡೆಸಲಿದ್ದಾರೆ.

ಒಂದೆಡೆ ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ನಟ ದರ್ಶನ್ ಆರೋಪಿಯಾಗಿ  ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಈ ಸಂದರ್ಭದಲ್ಲಿ ಅವರ ಪತ್ನಿಯ ಮನೆಯಲ್ಲಿ ಕಳ್ಳತನವಾದ ವರದಿಯಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ