ಹೈದರಾಬಾದ್ : ಟಾಲಿವುಡ್ ನ ಖ್ಯಾತ ಖಳನಟ ಜಯಪ್ರಕಾಶ್ ರೆಡ್ಡಿ ಇಂದು ಹೃದಯಾಘಾತದಿಮದ ಸಾವನಪ್ಪಿದ್ದಾರೆ.
ಇವರಿಗೆ 74 ವರ್ಷ ವಯಸ್ಸಾಗಿದ್ದು, ಇಂದು ಬೆಳಿಗ್ಗೆ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಮನೆಯ ಬಾತ್ ರೂಂ ನಲ್ಲಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೂ ದಾರಿ ಮಧ್ಯದಲ್ಲೇ ಸಾವನಪ್ಪಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಇವರು ‘ಬ್ರಹ್ಮಪುತ್ರುಡು’ ಸಿನಿಮಾ ಮೂಲಕ ಟಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದು, ಬಳಿಕ ಹಲವು ಸಿನಿಮಾಗಳಲ್ಲಿ ವಿಲನ್ ಪಾತ್ರದಲ್ಲಿ ನಟಿಸಿದ್ದಾರೆ. ಇವರ ಅಗಲುವಿಕೆಗೆ ಇಡೀ ಟಾಲಿವುಡ್ ಚಿತ್ರರಂಗ ಕಂಬನಿ ಮಿಡಿದಿದೆ.